ಉಳ್ಳಾಲ: ಮಂಗಳೂರು ಪ್ರವೇಶಕ್ಕೆ ನಕಲಿ ನೆಗೆಟಿವ್ ರಿಪೋರ್ಟ್ ತಂದ ನಾಲ್ವರ ನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ.
ಕೇರಳದ ಆದಿಲ್, ಹನಿನ್, ಇಸ್ಮಾಯಿಲ್ ಮತ್ತು ಅಬ್ದುಲ್ ತಮೀಮ್ ಬಂಧಿತರು. ನಾಲ್ವರುಮೊಬೈಲ್ ನಲ್ಲಿ ಎಡಿಟ್ ಮಾಡಿದ್ದ ನಕಲಿ ರಿಪೋರ್ಟ್ ತೋರಿಸಿ ಮಂಗಳೂರು ಪ್ರವೇಶಕ್ಕೆ ಯತ್ನಿಸುವಾಗ ,ಪೊಲೀಸರು ಪರಿಶೀಲನೆ ನಡೆಸಿ ಬಂಧಿಸಿದ್ದಾರೆ.
ನಾಲ್ವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
