ವರದಿ : ವಂಶಿ ಪಂಡಿತ್ ಮಂಗಳೂರು
ಕಣ್ಣೂರು 43ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ | ವೈಭವದ ಶೋಭಾಯಾತ್ರೆ
September 14, 2021
0
ಮಂಗಳೂರು : ಹೊರವಲಯದ ಪಡೀಲು ಸಮೀಪದ ಕಣ್ಣೂರು ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 43ನೇ ಕಣ್ಣೂರು ಗಣೇಶೋತ್ಸವವು ಕೋವಿಡ್ ಮಾನದಂಡಗಳನ್ನು ಅನುಸರಿಸಿಕೊಂಡು ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ಈ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲಾದ ಭೋಜನ ಶಾಲೆಯನ್ನು ಉದ್ಘಾಟಿಸಲಾಯಿತು. ಉದ್ಘಾಟನೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಪ್ರೇಮಾನಂದ ಶೆಟ್ಟಿರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಣ್ಣೂರು ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀ ಸುಧೀರ್ ಶೆಟ್ಟಿ ಕಣ್ಣೂರು, ಮಂಗಳೂರು ಮಹಾನಗರ ಪಾಲಿಕೆಯ ಕಣ್ಣೂರು ವಾರ್ಡ್ ಸದಸ್ಯೆ ಚಂದ್ರಾವತಿ ವಿಶ್ವನಾಥ್, ಮಂಗಳೂರು ಮಹಾನಗರ ಪಾಲಿಕೆಯ ಗುತ್ತಿಗೆದಾರರಾದ ಶ್ರೀ ಅನಿಲ್ ಮುಂತಾದವರು ಉಪಸ್ಥಿತರಿದ್ದರು. ಮೂರುದಿನಗಳ ಕಾಲ ಜರಗಿದ ಕಾರ್ಯಕ್ರಮದಲ್ಲಿ ವಿವಿಧ ಭಜನಾ ತಂಡಗಳು ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕೊನೆಯ ದಿನವಾದ ನಿನ್ನೆ ಭಜನೆ, ವಿಶೇಷ ಪೂಜೆ ಬಳಿಕ ವೈಭವದ ವಿಸರ್ಜನಾ ಶೋಭಾಯಾತ್ರೆ ನಡೆಯಿತು.
Tags
