ಮಾನ್ಯ: ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಮಾನ್ಯದ ತಿಮ್ಮಯ್ಯ (93) ಅವರು ನಿಧನಹೊಂದಿದರು. ವೃದ್ಧಾಪ್ಯ ಸಹಜ ಅಸೌಖ್ಯದಿಂದ ಬಳಲುತ್ತಿದ್ದ ಇವರನ್ನು ಕಾಸರಗೋಡಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನ ಸಂಭವಿಸಿದೆ.
ಯಕ್ಷಗಾನದಲ್ಲಿ ಸ್ತ್ರೀವೇಷ ಸಹಿತ ವಿವಿಧ ವೇಷಗಳನ್ನು ಧರಿಸಿ ಮಿಂಚಿದ್ದ ತಿಮ್ಮಯ್ಯ ಅವರು ಅಪಾರ ಜನಮೆಚ್ಚುಗೆ ಗಳಿಸಿದ್ದಾರೆ. ಹಲವಾರು ಮೇಳಗಳಲ್ಲಿ ವ್ಯವಸ್ಥಾಪಕರಾಗಿ, ವೇಷಧಾರಿಯಾಗಿಯೂ ಸಲ್ಲಿಸಿದ ಸೇವೆ ಅವಿಸ್ಮರಣೀಯವಾಗಿದೆ. ಇವರ ಕಲಾಸೇವೆಯನ್ನು ಗುರುತಿಸಿ ಮಾನ್ಯ, ಪುತ್ತೂರು, ಪೆರ್ಲ, ಉಡುಪಿ ಸಹಿತ ಹಲವು ಕಡೆಗಳಲ್ಲಿ ಇವರನ್ನು ಹಲವು ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಗಿದೆ.
ದ ಕ ಜಿಲ್ಲಾ ಸಾಹಿತ್ಯ ಸಮ್ಮೇಳನ ಪ್ರಶಸ್ತಿಯನ್ನು ಇವರು ಪಡೆದಿದ್ದಾರೆ. ಕೇರಳ ಸರಕಾರದ ಪ್ರತಿಷ್ಠಿತ ಸಂಗೀತ-ನಾಟಕ ಅಕಾಡೆಮಿ ಪ್ರಶಸ್ತಿಯನ್ನು ಇವರು ಪಡೆದಿದ್ದಾರೆ.
ಮಾನ್ಯ ಶ್ರೀ ವೆಂಕಟ್ರಮಣ ದೇವಸ್ಥಾನ ನವೀಕರಣ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದಂಗವಾಗಿ ತಿಮ್ಮಯ್ಯರನ್ನು ಸನ್ಮಾನಿಸಿ ಗೌರವಿಸಲಾಗಿದೆ. ಇವರ ಕಲಾ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರಕಾರ ಇವರಿಗೆ ಗೌರವಧನ ನೀಡುತ್ತಿತ್ತು.
ಇವರ ಪತ್ನಿ ಸುಂದರಿ ಹಾಗೂ ಓರ್ವ ಸಹೋದರಿ ಲೀಲಾವತಿ ಈ ಹಿಂದೆ ನಿಧನಹೊಂದಿದ್ದಾರೆ.
ಮೃತರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮಾಹಿತಿ : ಮಂಜುನಾಥ ಡಿ. ಮಾನ್ಯ
