ಉಳ್ಳಾಲ, ಅ.16: ಕುದ್ರೋಳಿ ದಸರಾ ವಿಸರ್ಜನೆ ವೀಕ್ಷಿಸಿ ಹಿಂತಿರುಗುತ್ತಿದ್ದ ಬೈಕ್ ಸವಾರರಿಬ್ಬರು ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ನಿನ್ನೆ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕೆ.ಸಿ.ರೋಡ್ ಬಳಿಯ ಉಚ್ಚಿಲ ಕಿರು ಸೇತುವೆಯಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಗ್ರಾಮದ ಕುಂಟಗೇರಡ್ಕ ನಿವಾಸಿಗಳಾದ ಕೃಷ್ಣಪ್ರಸಾದ್ ಗಟ್ಟಿ (26) ಪ್ರಜೀತ್ (24) ಮೃತರು. ನಿನ್ನೆ ರಾತ್ರಿ ಯುವಕರಿಬ್ಬರು ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
