ಕಾಸರಗೋಡು : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಕಾಸರಗೋಡು ಜಿಲ್ಲಾ ಸಮಿತಿ ಹಾಗೂ ಮಂಜೇಶ್ವರ ಖಂಡ ಸಮಿತಿ ಇದರ ಆಶ್ರಯದಲ್ಲಿ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಟ್ಟಾರಿನಲ್ಲಿ ಜಿಹಾದಿ ಭಯೋತ್ಪಾದಕರಿಂದ ಕತ್ತಿನೇಟಿಗೆ ಬಲಿಯಾದ ಭಾಜಪ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ನೆಟ್ಟಾರು ಇವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು..
ಈ ಕಾರ್ಯಕ್ರಮದಲ್ಲಿ ಕಾಸರಗೋಡಿನ ನಾಯಕರಾದ ಶ್ರೀಯುತ ಹುಬ್ಬಳ್ಳಿ ರಮೇಶ್ ನುಡಿನಮನ ಗೆೃದರು. ವಿಶ್ವ ಹಿಂದೂ ಪರಿಷತ್ ಕಾಸರಗೋಡು ಜಿಲ್ಲಾ ಅಧ್ಯಕ್ಷರಾದ ಶ್ರೀ ಜಯದೇವ ಖಂಡಿಗೆ ಉಪಸ್ಥಿತಿಯಿದ್ದರು.
ವಿಶ್ವ ಹಿಂದೂ ಪರಿಷತ್ ಮಂಜೇಶ್ವರ ಪ್ರಖಂಡ ಅಧ್ಯಕ್ಷರಾದ ಶ್ರೀ ಡಾ.ಜಯ ಪ್ರಕಾಶ್ ನಾರಾಯಣ್ ತೊಟ್ಟೆತ್ತೋಡಿ
ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಕಾಸರಗೋಡಿನ ಜಿಲ್ಲಾ ಸಮಿತಿಯ ಹಾಗೂ ಮಂಜೇಶ್ವರ, ಬದಿಯಡ್ಕ, ಕಾಸರಗೋಡು ಪ್ರಖಂಡದ ಮತ್ತು ಮಂಜೇಶ್ವರ ಖಂಡ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಸಂಘ ಪರಿವಾರದ ಎಲ್ಲಾ ಕಾರ್ಯಕರ್ತರು ಭಾಗವಹಿಸಿ
ಪುಷ್ಪಾರ್ಚನೆ ಗೈದು ಮೌನ ಪ್ರಾರ್ಥನೆ ಸಲ್ಲಿಸಿದರು.


