ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣದಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದೀಗ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.25 ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಈಗಾಗಲೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದೀಗ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮಂಗಳವಾರ (ಜು.25) ರಜೆ ಘೋಷಿಸಿ ಜಿಲ್ಲಾಧಿಕಾರಿ ಮು ಮುಗಿಲನ್ ಆದೇಶಿಸಿದ್ದಾರೆ.
ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ ಭಾರಿ ಮಳೆ ಹಿನ್ನೆಲೆಯಲ್ಲಿ ಜು.25ರಂದು (ಮಂಗಳವಾರ) ನಡೆಯಬೇಕಿದ್ದ ಮಂಗಳೂರು ವಿ.ವಿ. ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರಿಷ್ಕೃತ ದಿನಾಂಕ ಮರುನಿಗದಿಗೊಳಿಸಿ ಸಂಯೋಜಿತ ಕಾಲೇಜುಗಳಿಗೆ ತಿಳಿಸಲಾಗುವುದು ಎಂದು ವಿ.ವಿ. ಪ್ರಕಟಣೆ ತಿಳಿಸಿದೆ.
ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಜಿಲ್ಲಾಡಳಿತ ಸತತ 2ನೇ ದಿನವಾದ ಜುಲೈ 25ರಂದು ಎಲ್ಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದೆ. ಆದರೆ, ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಿಗೆ ರಜೆ ಘೋಷಿಸಿಲ್ಲ.

.jpeg)