ಅಧ್ಯಕ್ಷರಾಗಿ ಮಾಣಿ ಕೊಡಾಜೆ ನಿವಾಸಿ, ತೃತೀಯ ಬಿಬಿಎ ವ್ಯಾಸಂಗ ಮಾಡುತ್ತಿರುವ ಆಶೀಶ್ ಆಳ್ವ ಆಯ್ಕೆಯಾದರು.
ಕಾರ್ಯದರ್ಶಿಯಾಗಿ ವಿಟ್ಲ ಚಂದಳಿಕೆ ನಿವಾಸಿ, ಬಿಸಿಎ ವ್ಯಾಸಂಗ ಮಾಡುತ್ತಿರುವ ನಿಖಿಲ್, ಜೊತೆ ಕಾರ್ಯದರ್ಶಿಯಾಗಿ ಕುಂಬ್ರ ನಿವಾಸಿ, ಬಿಎ ವ್ಯಾಸಂಗ ಮಾಡುತ್ತಿರುವ ಪೃಥ್ವಿ ಆಯ್ಕೆಯಾದರು.
ಚುನಾವಣೆಯು ಕಾಲೇಜಿನ ಮುಖ್ಯ ಚುನಾವಣಾಧಿಕಾರಿ ಮತ್ತು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ತಂಡದ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಆಶಯದ ನುಡಿಗಳನ್ನಾಡಿದರು. ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಶುಭಹಾರೈಸಿದರು.

