ತೆಂಕುತಿಟ್ಟು ಯಕ್ಷಗಾನದಲ್ಲಿ ಅಗ್ರಗಣ್ಯ ಪಾರಂಪರಿಕ ಹಾಸ್ಯಗಾರರಾಗಿ ಅವರು ಪ್ರಸಿದ್ಧರು.
ಅವರು ಪುತ್ತೂರು ಪ್ರವಾಸಿ ಮೇಳದ ತಿರುಗಾಟಕ್ಕೆಂದು ಮೇಳದವರ ಜೊತೆ ಬೆಂಗಳೂರಿಗೆ ತೆರಳಿದ್ದರು.ಕಳೆದ ತಿರುಗಾಟದ ತನಕ ಹನುಮಗಿರಿ ಮೇಳದ ಕಲಾವಿದರಾಗಿದ್ದರು.
ಸೋಮವಾರ ಮಧ್ಯಾಹ್ನ 2-30 ಗಂಟೆಗೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಬಂಟ್ವಾಳ ಬೈಪಾಸ್ ರಸ್ತೆ ಬಳಿಯ ಅವರ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.



