ಮಂಗಳೂರು : ಹಿಂದೂ ಕಾರ್ಯಕರ್ತ, ಸುಹಾಸ್ ಶೆಟ್ಟಿ ಕೊಲೆ ವಿರೋಧಿಸಿ ಮಂಗಳೂರು ಬಂದ್ ಗೆ ಕರೆ ನೀಡಿದ್ದ ವಿಶ್ವ ಹಿಂದೂ ಪರಿಷತ್ತು ಮುಖಂಡ ಶರಣ್ ಪಂಪ್ವೆಲ್ ಅವರನ್ನು ಇದೀಗ ಪೊಲೀಸರು ಬಂದಿಸಿ, ನ್ಯಾಯಾದೀಶರ ಮುಂದೆ ಹಾಜರುಪಡಿಲಾಗಿದೆ. ಜಾಮೀನು ಮಂಜೂರಾಗಿದೆ.
ಅವರ ಬಂಧನವನ್ನು ಖಂಡಿಸಿ ಮಂಗಳೂರಿನ ಕದ್ರಿ ಪೊಲೀಸ್ ಠಾಣೆ ಎದುರು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ಆಕ್ರೋಶ ಹೊರಹಾಕುತ್ತಿದ್ದಾರೆ. ಸುಹಾಸ್ ಶೆಟ್ಟಿ ಕೊಲೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದ ಸಂಬಂಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಕದ್ರಿ ಪೊಲೀಸರು ಶರಣ್ ಪಂಪ್ವೆಲ್ ಅವರನ್ನು ಬಂಧಿಸಿದ್ದಾರೆ.
ಶರಣ್ ಪಂಪ್ ವೆಲ್ ಅರೆಸ್ಟ್ ಸುದ್ದಿ ಕೇಳಿದ ಕೂಡಲೇ ಠಾಣೆಯತ್ತ ಧಾವಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದು, ಅವರ ಬಿಡುಗಡೆಗೆ ಒತ್ತಾಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

