ಮಂಗಳೂರು ಮೇ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಮಳೆ ಜೊತೆ ಗಾಳಿ ಅಬ್ಬರ ಜೋರಾಗಿದೆ. ಅಲ್ಲದೆ ಮೇ 27 ಮತ್ತು 28 ರಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಈ ಹಿನ್ನಲೆ ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ, ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ದಿನಾಂಕ: 28.05.2025 ರವರೆಗೆ ಜಿಲ್ಲೆಯಾದ್ಯಂತ ರೆಡ್ - ಅಲರ್ಟ್ ಘೋಷಣೆಯಾಗಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ - ಮೇ 27 ಮತ್ತು 28 ರಂದು ಶಾಲೆಗಳಿಗೆ ರಜೆ
May 26, 2025
0
Tags


