ಮಂಗಳೂರು ಪ್ರತಿನಿಧಿ ವರದಿ : ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಮೇ 27ರವರೆಗೆ 6 ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

