ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹತ್ಯೆಯಿಂದ ಕೋಮುಸೂಕ್ಷ್ಮ ಉಂಟಾಗಿರುವ ವಾತಾವರಣ ಇದ್ದು, ಇದರ ಬೆನ್ನಲ್ಲೇ ರಾಜ್ಯ ಸರಕಾರದಿಂದ ಗುರುವಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರಿನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.

