ಮಂಜೇಶ್ವರ:- ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ರಂಗದ ಚೇತನ ಹೊಕ್ಕಾಡಿಗೋಳಿ ಹಕ್ಕೇರಿ ಶ್ರೀ ಸನತ್ ಕುಮಾರ್ ಶೆಟ್ಟಿ (ದುಬೈ) ಇವರ ಸೇವಾರ್ಥವಾಗಿ ಸ್ಕಂದ ಹೆಲ್ಪ್ ಡೆಸ್ಕ್ ಮಂಜೇಶ್ವರ ಹಾಗೂ ವಜ್ರಿಟೆಕ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಲಾಕ್ ಡೌನ್ ನಿಮಿತ್ತ ನೀಡುತ್ತಿರುವ "ಹಸಿವು ಅರಸಿದ ಹಸ್ತಗಳು" 32 ನೇ ದಿನದ ಮಧ್ಯಾಹ್ನದ ಬಿಸಿ ಊಟವನ್ನ ನೀಡಲಾಯಿತು.
ಈ ಕರೋನ ಮಹಾಮಾರಿಯ ಸಮಯದಲ್ಲಿ ಸರಕಾರ ಲಾಕ್ ಡೌನ್ ಘೋಷಿಸಿದಾಗ ಊರಿನ ಅವಶ್ಯಕತೆ ಇರುವ ಬಡ ಕುಟುಂಬಗಳಿಗೆ ಕ್ವಿಂಟಲ್ ಗಟ್ಟಲೆ ಅಕ್ಕಿ, ಕಿಟ್ಟ್ ಗಳನ್ನು ನೀಡಿ ಮಾನವೀಯತೆ ಮೆರೆದಿರುವ ಇವರು ಉದಾರ ಮನಸ್ಸಿನಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗು ಬಡವರ ಮನೆ ನಿರ್ಮಾಣಕ್ಕಾಗಿ ಸಂಪೂರ್ಣ ಸಹಾಯ ನೀಡಿರುತ್ತಾರೆ. ಯುವ ಕಂಬಳ ಪ್ರೇಮಿಯಾಗಿರುವ ಇವರು ಸಕ್ರಿಯವಾಗಿ ಕಂಬಳದಲ್ಲಿ ಭಾಗವಹಿಸಿ ಪ್ರಥಮ ದ್ವಿತೀಯ ಬಹುಮಾನಗಳನ್ನು ಪಡೆದಿರುತ್ತರೆ.ಕಳೆದ ಬಾರಿಯು ಕೂಡ ಕಂಬಳದಲ್ಲಿ ಬಹುಮಾನ ಪಡೆದಿರುತ್ತಾರೆ.
ತಲಪಾಡಿ ಕೆಳಗಿನ ಚೆಕ್ಕಿಂಗ್ ಸೆಂಟರ್ ಹಾಗೂ ಮೇಲಿನ ಚೆಕ್ಕಿಂಗ್ ಸೆಂಟರ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಂಜೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳಾದ ರಾಕೇಶ್ ರವರಿಗೆ ಸೇವಾರ್ಥಿ ಪರವಾಗಿ ಶ್ರೀ ಅರ್ಜುನ್ ಭಕ್ತ ಮಂಜೇಶ್ವರ್ ವಿತರಿಸುವ ಮೂಲಕ ಉದ್ಗಾಟಿಸಿದರು. ಬಳಿಕ ತಲಪಾಡಿಯಿಂದ ತೊಡಗಿ ಬಂದ್ಯೋಡ್ ತನಕ ಕರ್ತವ್ಯ ನಿರತ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ, ಆರೋಗ್ಯಾಧಿಕಾರಿಗಳಿಗೆ ಹಾಗೂ ವಿವಿಧ ರಾಜ್ಯಗಳಿಂದ ಕೇರಳ - ಕರ್ನಾಟಕ ಪ್ರವೇಶಿಸುವ ನಡುವೆ ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಲುಕಿರಿವ ಲಾರಿ ಚಾಲಕ ಕ್ಲಿನರ್ ಗಳಿಗೆ, ಅಸೌಖ್ಯ ಪೀಡಿತ ವೃದ್ಧರಿಗೆ, ಭಿಕ್ಷುಕರಿಗೆ ನೀಡಲಾಯಿತು. ಈ ಬಿಸಿ ಊಟ ವಿತರಣೆಯಲ್ಲಿ ಸ್ಕಂದ ಹೆಲ್ಪ್ ಡೆಸ್ಕ್ ನ ಪಧಾಧಿಕಾರಿಗಳಾದ ಲಕ್ಷ್ಮಣ್ ಭಕ್ತ ಮಂಜೇಶ್ವರ, ರತನ್ ಕುಮಾರ್ ಹೊಸಂಗಡಿ, ದೀಪಕ್ ರಾಜ್ ಉಪ್ಪಳ, ಮೊದಲಾದವರು ಉಪಸ್ಥಿತರಿದ್ದರು.

