ಸ್ಕಂದ ಹೆಲ್ಪ್ ಡೆಸ್ಕ್ ಮಂಜೇಶ್ವರ, ವಜ್ರಿ ಟೆಕ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಲಾಕ್ ಡೌನ್ ನಿಮಿತ್ತ ನೀಡುತ್ತಿರುವ "ಹಸಿವು ಅರಸಿದ ಹಸ್ತಗಳು" 39 ನೇ ದಿನದ ಮಧ್ಯಾಹ್ನದ ಬಿಸಿ ಊಟ ವಿತರಣೆ
June 17, 2021
0
ಮಂಜೇಶ್ವರ:- ಪೆರ್ಲದ ಕುದುಕ್ಕೊಳಿ ಪೆಟ್ರೋಲ್ ಬಂಕ್ ಮಾಲೀಕರಾದ ಅಬುದಾಬಿಯಲ್ಲಿ ಝಯೆದ್ ಫೌಂಡೇಶನ್ ನ ಸೀನಿಯರ್ ಫಿನಾನ್ಶಿಯಲ್ ಕಂಟ್ರೋಲರ್ ರಾಗಿ ಉದ್ಯೋಗದಲ್ಲಿರುವ ಕೊಡಿಗೈ ದಾನಿ, ತುಳುನಾಡ ಬೊಳ್ಳಿ ಪುರಸ್ಕೃತ ಶ್ರೀ ಅಬ್ದುಲ್ಲಾ ಮಾದುಮೂಲೆ (ಅಬುದಾಬಿ) ಇವರ ಸೇವಾರ್ಥವಾಗಿ ಸ್ಕಂದ ಹೆಲ್ಪ್ ಡೆಸ್ಕ್ ಮಂಜೇಶ್ವರ, ವಜ್ರಿ ಟೆಕ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಲಾಕ್ ಡೌನ್ ನಿಮಿತ್ತ ನೀಡುತ್ತಿರುವ "ಹಸಿವು ಅರಸಿದ ಹಸ್ತಗಳು" 39 ನೇ ದಿನದ ಮಧ್ಯಾಹ್ನದ ಬಿಸಿ ಊಟವನ್ನ ಇಂದು ಅಪರಾಹ್ನ ನೀಡಲಾಯಿತು. ತಲಪಾಡಿ ಕೆಳಗಿನ ಚೆಕ್ಕಿಂಗ್ ಸೆಂಟರ್ ಹಾಗೂ ಮೇಲಿನ ಚೆಕ್ಕಿಂಗ್ ಸೆಂಟರ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಂಜೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳಾದ ದಿವೇಶ್ ರವರಿಗೆ ಸೇವಾರ್ಥಿ ಪರವಾಗಿ ಸ್ಕಂದ ಹೆಲ್ಪ್ ಡೆಸ್ಕ್ ನ ಪಧಾಧಿಕಾರಿಯೂ, ಸಾಮಾಜಿಕ ಮುಂದಾಳುವಾಗಿರುವ ಶ್ರೀ ಲಕ್ಷ್ಮಣ್ ಭಕ್ತ ಮಂಜೇಶ್ವರರವರು ವಿತರಿಸುವ ಮೂಲಕ ಉದ್ಗಾಟಿಸಿದರು. ಬಳಿಕ ತಲಪಾಡಿಯಿಂದ ತೊಡಗಿಆ ಬಂದ್ಯೋಡ್ ತನಕ ಕರ್ತವ್ಯ ನಿರತ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ, ಆರೋಗ್ಯಾಧಿಕಾರಿಗಳಿಗೆ ಹಾಗೂ ವಿವಿಧ ರಾಜ್ಯಗಳಿಂದ ಕೇರಳ - ಕರ್ನಾಟಕ ಪ್ರವೇಶಿಸುವ ನಡುವೆ ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಲುಕಿರಿವ ಲಾರಿ ಚಾಲಕ ಕ್ಲಿನರ್ ಗಳಿಗೆ, ಅಸೌಖ್ಯ ಪೀಡಿತ ವೃದ್ಧರಿಗೆ, ಭಿಕ್ಷುಕರಿಗೆ ನೀಡಲಾಯಿತು. ಈ ಬಿಸಿ ಊಟ ವಿತರಣೆಯಲ್ಲಿ ಸ್ಕಂದ ಹೆಲ್ಪ್ ಡೆಸ್ಕ್ ನ ಪಧಾಧಿಕಾರಿಗಳಾದ:- ರತನ್ ಕುಮಾರ್ ಹೊಸಂಗಡಿ, ಸುಧೀನ್ ವರ್ಕಾಡಿ, ದೀಪಕ್ ರಾಜ್ ಉಪ್ಪಳ ಮೊದಲಾದವರು ಉಪಸ್ಥಿತರಿದ್ದರು.
Tags
