ಸ್ಕಂದ ಹೆಲ್ಪ್ ಡೆಸ್ಕ್ ಮಂಜೇಶ್ವರ, ವಜ್ರಿ ಟೆಕ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಲಾಕ್ ಡೌನ್ ನಿಮಿತ್ತ ನೀಡುತ್ತಿರುವ "ಹಸಿವು ಅರಸಿದ ಹಸ್ತಗಳು" 41 ನೇ ದಿನದ ಮಧ್ಯಾಹ್ನದ ಬಿಸಿ ಊಟ ವಿತರಣೆ
June 22, 2021
0
ಮಂಜೇಶ್ವರ:- ಪೆರ್ಲದ ಕುದುಕ್ಕೊಳಿ ಪೆಟ್ರೋಲ್ ಬಂಕ್ ಮಾಲೀಕರಾದ ಅಬುದಾಬಿಯಲ್ಲಿ ಝಯೆದ್ ಫೌಂಡೇಶನ್ ನ ಸೀನಿಯರ್ ಫಿನಾನ್ಶಿಯಲ್ ಕಂಟ್ರೋಲರ್ ರಾಗಿ ಉದ್ಯೋಗದಲ್ಲಿರುವ ಕೊಡಿಗೈ ದಾನಿ, ತುಳುನಾಡ ಬೊಳ್ಳಿ ಪುರಸ್ಕೃತ ಶ್ರೀ ಅಬ್ದುಲ್ಲಾ ಮಾದುಮೂಲೆ (ಅಬುದಾಬಿ) ಇವರ ಸೇವಾರ್ಥವಾಗಿ ಸ್ಕಂದ ಹೆಲ್ಪ್ ಡೆಸ್ಕ್ ಮಂಜೇಶ್ವರ, ವಜ್ರಿ ಟೆಕ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಲಾಕ್ ಡೌನ್ ನಿಮಿತ್ತ ನೀಡುತ್ತಿರುವ "ಹಸಿವು ಅರಸಿದ ಹಸ್ತಗಳು" 41 ನೇ ದಿನದ ಮಧ್ಯಾಹ್ನದ ಬಿಸಿ ಊಟವನ್ನ ಇಂದು ಅಪರಾಹ್ನ ನೀಡಲಾಯಿತು. ತಲಪಾಡಿ ಕೆಳಗಿನ ಚೆಕ್ಕಿಂಗ್ ಸೆಂಟರ್ ಹಾಗೂ ಮೇಲಿನ ಚೆಕ್ಕಿಂಗ್ ಸೆಂಟರ್ ನಲ್ಲಿ ಹಾಗೂ ವಾಮಂಜೂರು ಚೆಕ್ ಪೋಸ್ಟ್ ಅಬಕಾರಿ ಇಲಾಖೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಬಕಾರಿ ಅಧಿಕಾರಿಗಳಾದ ಶ್ರೀ ಸುರೇಂದ್ರನ್ ರವರಿಗೆ ಸೇವಾರ್ಥಿ ಪರವಾಗಿ ಟೀಮ್ ಮಂಜುಶ್ರೀ ತುಳುನಾಡ್(ರಿ.) ಮಂಗಳೂರು ಸಂಸ್ಥೆಯ ರಾಜ್ಯಾಧ್ಯಕ್ಷ ಶ್ರೀ ಮನೋಜ್ ಕುಲಾಲ್ ಕೊಡೆಕ್ಕಲ್ ವಿತರಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಟೀಮ್ ಮಂಜುಶ್ರೀ ತಂಡದ ಶ್ರೀ ಸಚಿನ್ ಬಜಿರೆ, ಶ್ರೀ ಪುಷ್ಪರಾಜ್ ರಾವ್, ಶ್ರೀ ವಂಶಿ ಪಂಡಿತ್ ಉಪಸ್ಥಿತರಿದ್ದರು. ಬಳಿಕ ತಲಪಾಡಿಯಿಂದ ತೊಡಗಿ ಬಂದ್ಯೋಡ್ ತನಕ ಕರ್ತವ್ಯ ನಿರತ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ, ಆರೋಗ್ಯಾಧಿಕಾರಿಗಳಿಗೆ ಹಾಗೂ ವಿವಿಧ ರಾಜ್ಯಗಳಿಂದ ಕೇರಳ - ಕರ್ನಾಟಕ ಪ್ರವೇಶಿಸುವ ನಡುವೆ ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಲುಕಿರಿವ ಲಾರಿ ಚಾಲಕ ಕ್ಲಿನರ್ ಗಳಿಗೆ, ಅಸೌಖ್ಯ ಪೀಡಿತ ವೃದ್ಧರಿಗೆ, ಭಿಕ್ಷುಕರಿಗೆ ನೀಡಲಾಯಿತು. ಈ ಬಿಸಿ ಊಟ ವಿತರಣೆಯಲ್ಲಿ ಸ್ಕಂದ ಹೆಲ್ಪ್ ಡೆಸ್ಕ್ ನ ಪಧಾಧಿಕಾರಿಗಳಾದ:- ಶ್ರೀ ಲಕ್ಷ್ಮಣ್ ಭಕ್ತ ಮಂಜೇಶ್ವರ, ಶ್ರೀ ರತನ್ ಕುಮಾರ್ ಹೊಸಂಗಡಿ, ಶ್ರೀ ಸುಕೇಶ್ ಬೆಜ್ಜ, ಶ್ರೀ ಸುಧೀನ್ ವರ್ಕಾಡಿ, ಶ್ರೀ ದೀಪಕ್ ರಾಜ್ ಉಪ್ಪಳ ಮೊದಲಾದವರು ಉಪಸ್ಥಿತರಿದ್ದರು.
Tags
