ತಲಪಾಡಿ ಕೆಳಗಿನ ಚೆಕ್ಕಿಂಗ್ ಸೆಂಟರ್ ಹಾಗೂ ಮೇಲಿನ ಚೆಕ್ಕಿಂಗ್ ಸೆಂಟರ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಂಜೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳಾದ ಬಾಬುರವರಿಗೆ ಸೇವಾರ್ಥಿ ಪರವಾಗಿ ಶ್ರೀ ಅರ್ಜುನ್ ಭಕ್ತ ಮಂಜೇಶ್ವರ ವಿತರಿಸುವ ಮೂಲಕ ಉದ್ಗಾಟಿಸಿದರು. ಬಳಿಕ ತಲಪಾಡಿಯಿಂದ ತೊಡಗಿ ಬಂದ್ಯೋಡ್ ತನಕ ಕರ್ತವ್ಯ ನಿರತ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ, ಆರೋಗ್ಯಾಧಿಕಾರಿಗಳಿಗೆ ಹಾಗೂ ವಿವಿಧ ರಾಜ್ಯಗಳಿಂದ ಕೇರಳ - ಕರ್ನಾಟಕ ಪ್ರವೇಶಿಸುವ ನಡುವೆ ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಲುಕಿರಿವ ಲಾರಿ ಚಾಲಕ ಕ್ಲಿನರ್ ಗಳಿಗೆ, ಅಸೌಖ್ಯ ಪೀಡಿತ ವೃದ್ಧರಿಗೆ, ಭಿಕ್ಷುಕರಿಗೆ ನೀಡಲಾಯಿತು. ಈ ಬಿಸಿ ಊಟ ವಿತರಣೆಯಲ್ಲಿ ಸ್ಕಂದ ಹೆಲ್ಪ್ ಡೆಸ್ಕ್ ನ ಪಧಾಧಿಕಾರಿಗಳಾದ ಲಕ್ಷ್ಮಣ್ ಭಕ್ತ ಮಂಜೇಶ್ವರ, ರತನ್ ಕುಮಾರ್ ಹೊಸಂಗಡಿ, ಸುಧೀನ್ ವರ್ಕಾಡಿ, ಮೊದಲಾದವರು ಉಪಸ್ಥಿತರಿದ್ದರು.
ಸ್ಕಂದ ಹೆಲ್ಪ್ ಡೆಸ್ಕ್ ಮಂಜೇಶ್ವರ ಹಾಗೂ ವಜ್ರಿ ಟೆಕ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಸಂಸ್ಥೆ ಕರೊನಾ ಹಿನ್ನೆಲೆಯಲ್ಲಿ ನೀಡುತ್ತಿರುವ "ಹಸಿವು ಹರಸಿದ ಹಸ್ತಗಳು" ಎಂಬ ಇಪ್ಪತ್ತ ಆರನೇ ದಿನದ ಮಧ್ಯಾಹ್ನದ ಬಿಸಿ ಊಟ ವಿತರಣಾ ಕಾರ್ಯಕ್ರಮ
June 04, 2021
0
ಮಂಜೇಶ್ವರ:- ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ರಂಗದ ಧುರೀಣರೂ, ಸಮಾಜ ಸೇವಕರೂ, ಕರ್ನಾಟಕ ಸಂಘ ಶಾರ್ಜಾದ ಮಾಜಿ ಅಧ್ಯಕ್ಷರಾದ "ಶ್ರೀ ಆನಂದ ಬೈಲೂರು (ದುಬೈ)" ಇವರ ಸೇವಾರ್ಥವಾಗಿ ಸ್ಕಂದ ಹೆಲ್ಪ್ ಡೆಸ್ಕ್ ಮಂಜೇಶ್ವರ ಹಾಗೂ ವಜ್ರಿ ಟೆಕ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಸಂಸ್ಥೆ ಕರೊನಾ ಹಿನ್ನೆಲೆಯಲ್ಲಿ ನೀಡುತ್ತಿರುವ "ಹಸಿವು ಹರಸಿದ ಹಸ್ತಗಳು" ಎಂಬ ಇಪ್ಪತ್ತ ಆರನೇ ದಿನದ ಮಧ್ಯಾಹ್ನದ ಬಿಸಿ ಊಟ ವಿತರಣೆ ಇಂದು ನಡೆಯಿತು.
Tags
