ಮಂಜೇಶ್ವರ:- ತುಳುನಾಡು ಜನತೆಗೆ ಮರುಭೂಮಿಯ ಓಯಸಿಸ್ ನಂತೆ ತೋರುವ ಸರ್ವತೋಮುಖ ಹರಿಕಾರ ಶ್ರೀ ಸರ್ವೋತ್ತಮ ಶೆಟ್ಟಿ ಅಬುದಾಬಿ ಇವರ ಸೇವಾರ್ಥವಾಗಿ ಸ್ಕಂದ ಹೆಲ್ಪ್ ಡೆಸ್ಕ್ ಮಂಜೇಶ್ವರ, ವಜ್ರಿ ಟೆಕ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಲಾಕ್ ಡೌನ್ ನಿಮಿತ್ತ ನೀಡುತ್ತಿರುವ "ಹಸಿವು ಅರಸಿದ ಹಸ್ತಗಳು" 36 ನೇ ದಿನದ ಮಧ್ಯಾಹ್ನದ ಬಿಸಿ ಊಟವನ್ನ ಸುರಿಯುತ್ತಿರುವ ಧಾರಾಕಾರ ಮಳೆಯ ನಡುವೆ ಕೂಡಾ ಇಂದು ಅಪರಾಹ್ನ ನೀಡಲಾಯಿತು. ತಲಪಾಡಿ ಕೆಳಗಿನ ಚೆಕ್ಕಿಂಗ್ ಸೆಂಟರ್ ಹಾಗೂ ಮೇಲಿನ ಚೆಕ್ಕಿಂಗ್ ಸೆಂಟರ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಂಜೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳಾದ ಜಿತೇಶ್ ರವರಿಗೆ ಸೇವಾರ್ಥಿ ಪರವಾಗಿ ಸ್ಕಂದ ಹೆಲ್ಪ್ ಡೆಸ್ಕ್ ನ ಸಂಸ್ಥಾಪಕರಾದ ಶ್ರೀ ರತನ್ ಕುಮಾರ್ ಹೊಸಂಗಡಿ ವಿತರಿಸುವ ಮೂಲಕ ಉದ್ಗಾಟಿಸಿದರು. ಬಳಿಕ ತಲಪಾಡಿಯಿಂದ ತೊಡಗಿಆ ಬಂದ್ಯೋಡ್ ತನಕ ಕರ್ತವ್ಯ ನಿರತ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ, ಆರೋಗ್ಯಾಧಿಕಾರಿಗಳಿಗೆ ಹಾಗೂ ವಿವಿಧ ರಾಜ್ಯಗಳಿಂದ ಕೇರಳ - ಕರ್ನಾಟಕ ಪ್ರವೇಶಿಸುವ ನಡುವೆ ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಲುಕಿರಿವ ಲಾರಿ ಚಾಲಕ ಕ್ಲಿನರ್ ಗಳಿಗೆ, ಅಸೌಖ್ಯ ಪೀಡಿತ ವೃದ್ಧರಿಗೆ, ಭಿಕ್ಷುಕರಿಗೆ ನೀಡಲಾಯಿತು. ಈ ಬಿಸಿ ಊಟ ವಿತರಣೆಯಲ್ಲಿ ಸ್ಕಂದ ಹೆಲ್ಪ್ ಡೆಸ್ಕ್ ನ ಪಧಾಧಿಕಾರಿಗಳಾದ ಲಕ್ಷ್ಮಣ್ ಭಕ್ತ ಮಂಜೇಶ್ವರ, ದೀಪಕ್ ರಾಜ್ ಉಪ್ಪಳ, ಸುಧೀನ್ ವರ್ಕಾಡಿ, ಮೊದಲಾದವರು ಉಪಸ್ಥಿತರಿದ್ದರು.
ಸುರಿಯುತ್ತಿರುವ ಧಾರಾಕಾರ ಮಳೆಯ ನಡುವೆಯೂ ಹಸಿವು ನೀಗಿಸುವ ಯತ್ನವನ್ನ ಕೈ ಬಿಡದ ಸ್ಕಂದ ಹೆಲ್ಪ್ ಡೆಸ್ಕ್
June 14, 2021
0
Tags
