ಸ್ಕಂದ ಹೆಲ್ಪ್ ಡೆಸ್ಕ್ ಮಂಜೇಶ್ವರ ಹಾಗೂ ವಜ್ರಿ ಟೆಕ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಸಂಸ್ಥೆ ಕರೊನಾ ಹಿನ್ನೆಲೆಯಲ್ಲಿ ನೀಡುತ್ತಿರುವ "ಹಸಿವು ಹರಸಿದ ಹಸ್ತಗಳು" ಎಂಬ ಇಪ್ಪತ್ತಏಳನೇ ದಿನದ ಮಧ್ಯಾಹ್ನದ ಬಿಸಿ ಊಟ ವಿತರಣೆ
June 05, 2021
0
ಮಂಜೇಶ್ವರ:- ಕೊಡ್ಲ ಮೊಗರು ಪಟ್ಟಿಲ್ತಾಡಿ "ಆಶೀರ್ವಾದ ನಿಲಯ" ನಿವಾಸಿ ಮಾ. ಜಿತಿನ್ .ಎಸ್ ಹಾಗೂ ಕು. ಮನಸ್ವಿ .ಎಸ್ ಹೆತ್ತವರಾದ ಶ್ರೀ ಶಶಿಧರ್ ಮತ್ತು ಶ್ರೀಮತಿ ಅಶ್ವಿನಿ ಎಂ.ಎಲ್ (ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ) ಇವರ ಸೇವಾರ್ಥವಾಗಿ ಸ್ಕಂದ ಹೆಲ್ಪ್ ಡೆಸ್ಕ್ ಮಂಜೇಶ್ವರ ಹಾಗೂ ವಜ್ರಿ ಟೆಕ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಸಂಸ್ಥೆ ಕರೊನಾ ಹಿನ್ನೆಲೆಯಲ್ಲಿ ನೀಡುತ್ತಿರುವ "ಹಸಿವು ಹರಸಿದ ಹಸ್ತಗಳು" ಎಂಬ ಇಪ್ಪತ್ತಏಳನೇ ದಿನದ ಮಧ್ಯಾಹ್ನದ ಬಿಸಿ ಊಟ ವಿತರಣೆ ಇಂದು ನಡೆಯಿತು. ತಲಪಾಡಿ ಕೆಳಗಿನ ಚೆಕ್ಕಿಂಗ್ ಸೆಂಟರ್ ಹಾಗೂ ಮೇಲಿನ ಚೆಕ್ಕಿಂಗ್ ಸೆಂಟರ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಂಜೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳಾದ ಉಣ್ಣಿಕೃಷ್ಣನ್ ರವರಿಗೆ ಸೇವಾರ್ಥಿ ಪರವಾಗಿ ಸ್ಕಂದ ಹೆಲ್ಪ್ ಡೆಸ್ಕ್ ನ ಕೋಶಾಧಿಕಾರಿ ಶ್ರೀ ಸುಧೀನ್ ವರ್ಕಾಡಿ ವಿತರಿಸುವ ಮೂಲಕ ಉದ್ಗಾಟಿಸಿದರು. ಬಳಿಕ ತಲಪಾಡಿಯಿಂದ ತೊಡಗಿ ಬಂದ್ಯೋಡ್ ತನಕ ಕರ್ತವ್ಯ ನಿರತ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ, ಆರೋಗ್ಯಾಧಿಕಾರಿಗಳಿಗೆ ಹಾಗೂ ವಿವಿಧ ರಾಜ್ಯಗಳಿಂದ ಕೇರಳ - ಕರ್ನಾಟಕ ಪ್ರವೇಶಿಸುವ ನಡುವೆ ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಲುಕಿರಿವ ಲಾರಿ ಚಾಲಕ ಕ್ಲಿನರ್ ಗಳಿಗೆ, ಅಸೌಖ್ಯ ಪೀಡಿತ ವೃದ್ಧರಿಗೆ, ಭಿಕ್ಷುಕರಿಗೆ ನೀಡಲಾಯಿತು. ಈ ಬಿಸಿ ಊಟ ವಿತರಣೆಯಲ್ಲಿ ಸ್ಕಂದ ಹೆಲ್ಪ್ ಡೆಸ್ಕ್ ನ ಪಧಾಧಿಕಾರಿಗಳಾದ ಲಕ್ಷ್ಮಣ್ ಭಕ್ತ ಮಂಜೇಶ್ವರ, ರತನ್ ಕುಮಾರ್ ಹೊಸಂಗಡಿ, ದೀಪಕ್ ರಾಜ್ ಉಪ್ಪಳ, ಸುಖೇಶ್ ಬೆಜ್ಜ, ಅರ್ಜುನ್ ಭಕ್ತ ಮಂಜೇಶ್ವರ ಮೊದಲಾದವರು ಉಪಸ್ಥಿತರಿದ್ದರು.
Tags
