ಸುಬ್ರಹ್ಮಣ್ಯ: ದ.ಕ.ದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಆದೇಶದಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30 ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ. ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಭಾನುವಾರ ವಾರಾಂತ್ಯದ ದಿನಗಳಲ್ಲಿ ಶ್ರೀ ದೇವರ ದರುಶನಕ್ಕೆ ಕೂಡಾ ಅವಕಾಶ ನಿರ್ಬಂಧಿಸಲಾಗಿದೆ ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ. ಆ.30ರವರೆಗೆ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಯಾವುದೇ ಸೇವೆಗಳು ನಡೆಯುವುದಿಲ್ಲ. ಬೆಳಗ್ಗೆ 7ಗಂಟೆಯಿಂದ ಮಧ್ಯಾಹ್ನ 11.30 ರತನಕ, ಮಧ್ಯಾಹ್ನ 12.15-1.30 ಹಾಗೂ 2.30ರಿಂದ ರಿಂದ ಸಂಜೆ 7ರ ತನಕ ಭಕ್ತರು ಶ್ರೀ ದೇವರ ದರುಶನ ಮಾಡಬಹುದು. ಈ ಸಂದರ್ಭ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.
ವಾರಾಂತ್ಯ ದಿನಗಳನ್ನು ಹೊರತು ಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ. ತಂಗುವ ಭಕ್ತರು 72 ಗಂಟೆಯೊಳಗೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.
ಕೃಪೆ : ಅಂತರ್ಜಾಲ

ಧನ್ಯವಾದಗಳು 🙏🏻🙏
ReplyDeleteಮಂಜುಶ್ರೀ ನ್ಯೂಸ್ 🙏🌺