ಕಾಶಿಪಟ್ಣ: ಕಾಶಿಪಟ್ಣದ ಕೇಳೆದ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಕೋವಿಡ್ ಮಾನದಂಡಗಳನ್ನು ಅನುಸರಿಸಿಕೊಂಡು ಆಚರಿಸಲಾಯಿತು. ಶಾಲಾಭಿವೃಧ್ಧಿ ಮತ್ತು ಮೇಲುಸ್ತುವಾರಿ ಅಧ್ಯಕ್ಷರಾದ ಶ್ರೀಮತಿ ಸುಮಲತಾ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಅಶೋಕ್ ಕುಮಾರ್ ಜೈನ್, ರವೀಂದ್ರ ಪಿ, ಶ್ರೀ ಮತಿ ಸವಿತಾ, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಹಮ್ಮದ್ ಶಾಫಿ, ಅಂಗನವಾಡಿ ಕಾರ್ಯಕರ್ತೆಯವರಾದ ಶ್ರೀಮತಿ ಲಲಿತಾ, ಶ್ರೀಮತಿ ಶಾಯಿನ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಪ್ರಶಾಂತ್ ಎ, ಸಹ ಶಿಕ್ಷಕಿಯರಾದ ಸುರೇಖಾ, ಜ್ಯೋತಿ, ಮಮತಾ ಹಾಗೂ ಪೋಷಕರು ಉಪಸ್ಥಿತರಿದ್ದರು.
