ಉಡುಪಿ, ಪಡುಕುತ್ಯಾರು: ಧಾರ್ಮಿಕ ಕೇಂದ್ರಗಳು ಸಾಮಾಜಿಕ ಸ್ಪಂದನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಜನ ಸಾಮಾನ್ಯರ ಮೆಚ್ಚುಗೆಗೆ ಪಾತ್ರವಾಗುತ್ತದೆ. ಈ ನಿಟ್ಟಿನಲ್ಲಿ ಆನೆಗುಂದಿ ಮಠವು 4550 ಮಂದಿಗೆ ಆಯೋಜಿಸಿದ ಉಚಿತ ಕೋವಿಡ್ ಲಸಿಕಾ ಶಿಬಿರ ರಾಜ್ಯಕ್ಕೆ ಮಾದರಿ ಎಂದು ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನುಡಿದರು.
ಅವರು ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನದ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಹಾಗೂ ಪ್ರತಿಷ್ಠಾನದ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡುತ್ತಿದ್ದರು. ವಿಶ್ವಕರ್ಮ ಸಮಾಜದ ಸಂಘಟನೆಗೆ, ಅಭಿವೃದ್ಧಿಗೆ ಮಾತ್ರ ಶ್ರೀಗಳವರು ಸೀಮಿತ ವಾಗಿರದೆ ಸಮಸ್ತ ಹಿಂದೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ. ಮುಜರಾಯಿ ಇಲಾಖೆಯಲ್ಲಿ ಸಚಿವನಾಗಿದ್ದಾಗ ಧಾರ್ಮಿಕ ಶ್ರದ್ದಾ ಕೇಂದ್ರಗಳ ಅಭಿವೃದ್ಧಿಯ ಜತೆಗೆ ಸಪ್ತಪದಿ ಯೋಜನೆಯ ಮೂಲಕ ಸಾಮಾಜಿಕ ಕಳಕಳಿಗೆ ಸ್ವಂದಿಸುವ ಹೊಸ ಪರಿಕಲ್ಪನೆಗೆ ರೂಪ ನೀಡಿದ್ದೇನೆ. ಇದೀಗ ಹೊಸ ಖಾತೆಯ ಮೂಲಕ ಇನ್ನಷ್ಟು ಸಮಾಜ ಸೇವೆ ಮಾಡುವ, ಹಿಂದುಳಿದ ವಿಭಾಗಗಳ ಅಭಿವೃದ್ಧಿಗೆ ಅವಕಾಶ ಸಿಕ್ಕಿದೆ ಎಂದು ಅವರು ನುಡಿದರು. ಸಮಾರಂಭದಲ್ಲಿ ಆಶೀರ್ವಚನ ನೀಡಿದ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಸರಳ ಸಜ್ಜನ ಸಚ್ಚಾರಿತ್ರ್ಯ ಹೊಂದಿದ ಅಪರೂಪದ ರಾಜಕಾರಣಿಯಾಗಿರುವ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಎಂ ಎಲ್ಸಿ ಯಿಂದ ಮೂರು ಬಾರಿ ಸಚಿವರಾದರೂ ಅವರ ಸನ್ನಡತೆಯಲ್ಲಿ ಕಿಂಚಿತ್ ಬದಲಾವಣೆ ಕಂಡಿಲ್ಲ. ಸಾಮಾಜಿಕ ಕಳಕಳಿ ಹೊಂದಿರುವ ಸಚಿವರಿಂದ ಇನ್ನಷ್ಟು ಸಮಾಜಮುಖೀ ಅಭಿವೃದ್ಧಿ ಕಾರ್ಯಗಳು ನೆರವೇರಲಿ ಎಂದು ನುಡಿದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಪೇಟಾ ತೊಡಿಸಿ ಮಹಾಸಂಸ್ಥಾನದ ಶಾಲು ಫಲಪುಷ್ಪ ನೀಡಿ ಗೌರವಿಸಲಾಯಿತು. ಸಚಿವರು ಜಗದ್ಗುರುಗಳವರಿಗೆ ಫಲನ್ಯಾಸ ಮಾಡಿ ಅನುಗ್ರಹ ಮಂತ್ರಾಕ್ಷತೆಯನ್ನು ಪಡೆದರು. ಇದೇ ವೇಳೆ ಮುಖ್ಯಮಂತ್ರಿಗಳವರ ನೆರ ಪರಿಹಾರ ನಿಧಿಗೆ ಮಹಾಸಂಸ್ಥಾನದ ವತಿಯಿಂದ ನಿಧಿಯನ್ನು ಸಮರ್ಪಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಹಾಗೂ ಪ್ರತಿಷ್ಠಾನದ ಅಧ್ಯಕ್ಷರಾದ ವಡೇರಹೋಬಳಿ ಶ್ರೀಧರ ಆಚಾರ್ಯ ವಹಿಸಿದ್ದರು. ಸಭೆಯಲ್ಲಿ ವಿಶ್ವಕರ್ಮ ಅಭಿವೃದ್ಧಿ ನಿಗಮದ ಸದಸ್ಯ ಕಳಿ ಚಂದ್ರಯ್ಯ ಆಚಾರ್ಯ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲತಾ ಎಸ್. ಆಚಾರ್ಯ ಕುತ್ಯಾರು, ನೇತಾರರಾದ ಸುರೇಶ್ ಶೆಟ್ಟಿ ಗುರ್ಮೆ, ಗೀತಾಂಜಲಿ ಸುವರ್ಣ, ಶಿಲ್ಪಾ ಡಿ.ಸುವರ್ಣ, ಶ್ರೀ ನಾಗಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನೀ ಪಾಠಶಾಲೆಯ ಪ್ರಧಾನ ಸಂಚಾಲಕ ಬಿ.ಸೂರ್ಯ ಕುಮಾರ್ ಆಚಾರ್ಯ ಹಳೆಯಂಗಡಿ, ಆನೆಗುಂದಿ ಗುರುಸೇವಾ ಪರಿಷತ್ ಅಧ್ಯಕ್ಷ ರೂಪೇಶ್ ಆಚಾರ್ಯ ಶಿರ್ವ, ಆನೆಗುಂದಿ ಶ್ರೀ ಸರಸ್ವತೀ ಎಜ್ಯುಕೇಶನಲ್ ಟ್ರಸ್ಟ್ ಅಸೆಟ್ ಅಧ್ಯಕ್ಷ ತ್ರಾಸಿ ಸುಧಾಕರ ಆಚಾರ್ಯ, ಗೋವು ಮತ್ತು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಕರಂಬಳ್ಳಿ ಜಯಕರ ಆಚಾರ್ಯ, ಶ್ರೀ ಸರಸ್ವತೀ ಮಾತೃಮಂಡಳಿ ಅಧ್ಯಕ್ಷೆ ಸಂದ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಬೆಳುವಾಯಿ ಸುಂದರ ಆಚಾರ್ಯ, ಕಾಪು ಪುರಸಭೆ ಅಧ್ಯಕ್ಷ ಅನಿಲ್, ನವೀನ್ ಶೆಟ್ಟಿ ಕುತ್ಯಾರು, ಪ್ರಸಾದ್ ಶೆಟ್ಟಿ ಕುತ್ಯಾರು, ಶ್ರೀಕಾಂತ ನಾಯ್ಕ ಕುತ್ಯಾರು, ಕೋವಿಡ್ ನೋಡಲ್ ಅಧಿಕಾರಿ ದಿನೇಶ್ ಆಚಾರ್ಯ ಪಡುಬಿದ್ರಿ ಕೆ. ರಾಘವೇಂದ್ರ ಆಚಾರ್ಯ ಉಡುಪಿ, ಕೆ.ನಾಗರಾಜ ಆಚಾರ್ಯ ಕಾಡಬೆಟ್ಟು, ಎಚ್ ರತ್ನಾಕರ ಆಚಾರ್ಯ ಉದ್ಯಾವರ, ಪ್ರಶಾಂತ ಆಚಾರ್ಯ ಕಟಪಾಡಿ, ಶ್ರೀಧರ ಜೆ.ಆಚಾರ್ಯ ಕಟಪಾಡಿ ಉಪಸ್ಥಿತರಿದ್ದರು. ಶ್ರೀ ನಾಗಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನೀ ಪಾಠಶಾಲೆ ಇದ್ಯಾರ್ಥಿಗಳಿಂದ ವೇದಘೋಷ ನಡೆಯಿತು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂಬಿ ಆಚಾರ್ ಕಂಬಾರು ಸ್ವಾಗತಿಸಿದರು. ಮಹಾಸಂಸ್ಥಾನದ ಆಪ್ತ ಸಹಾಯಕ ಲೋಲಾಕ್ಷ ಶರ್ಮಾ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಅರವಿಂದ ವೈ.ಆಚಾರ್ಯ ಬೆಳುವಾಯಿ ಅವರು ಧನ್ಯವಾದವನ್ನಿತ್ತರು.
