ಬಿಜೆಪಿ ಓಬಿಸಿ ಮೋರ್ಚಾ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
September 16, 2021
0
ಕಾಸರಗೋಡು : ಭಾರತೀಯ ಜನತಾ ಪಕ್ಷ ಓಬಿಸಿ ಮೋರ್ಚಾ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಹೊಸಂಗಡಿಯ ಪ್ರೇರಣಾ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಓಬಿಸಿ ಮೋರ್ಚಾ ರಾಜ್ಯ ಕೋಶಾಧಿಕಾರಿ ನ್ಯಾಯವಾದಿ ನವೀನ್ ರಾಜ್ ಇವರು ಪುಷ್ಪಾರ್ಚನೆಯ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬಿಜೆಪಿ ಮಂಜೇಶ್ವರ ಮಂಡಲ ಉಪಾಧ್ಯಕ್ಷರಾದ ಶ್ರೀ ಪದ್ಮನಾಭ ಕಡಪ್ಪುರ ವಹಿಸಿದರು. ಓಬಿಸಿ ಮೋರ್ಚಾ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಶ್ರೀ ಪುಷ್ಪರಾಜ್, ಓಬಿಸಿ ಮೋರ್ಚಾ ಜಿಲ್ಲಾ ಸಮಿತಿ ಸದಸ್ಯರಾದ ದೇವರಾಜ್ ಎಂ ಎಸ್, ಬಿಜೆಪಿ ಮಂಜೇಶ್ವರ ಮಂಡಲ ಕಾರ್ಯದರ್ಶಿ ಆದರ್ಶ್ ಬಿ ಎಂ, ಓಬಿಸಿ ಮೋರ್ಚಾ ಮಂಜೇಶ್ವರ ಪಂಚಾಯತ್ ಸಮಿತಿ ಕಾರ್ಯದರ್ಶಿ ಶ್ರೀ ದಯಾಪ್ರಸನ್ನ ಆಚಾರ್ಯ, ಬಿಜೆಪಿ ಮಂಜೇಶ್ವರ ಪಂಚಾಯತ್ ಸಮಿತಿ ಅಧ್ಯಕ್ಷರಾದ ರಾಜೇಶ್ ಮಜಲ್, ಪ್ರಮುಖರಾದ ದಿವಕರ ಬಿ ಎನ್, ಪವನ್ ಕುಮಾರ್ ಹೊಸಂಗಡಿ, ರತನ್ ಕುಮಾರ್ ಹೊಸಂಗಡಿ, ಮೊದಲಾದವರು ಉಪಸ್ಥಿತರಿದ್ದರು.
