ಕುಂಬಳೆ : ನಾರಯಣ ಮಂಗಲ ನಿವಾಸಿ ದೇವದಾಸ್ ಶೆಟ್ಟಿ ಯವರ ಪುತ್ರಿ ಕವನ (16) ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ವಿದ್ಯಾರ್ಥಿನಿ. ನಿನ್ನೆ ರಾತ್ರಿ ಎಲ್ಲರೊಂದಿಗೆ ಊಟ ಮಾಡಿ ಮಲಗಿದ್ದರು. ಬೆಳಿಗ್ಗೆ ನೋಡುವಾಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಎನ್ನಲಾಗಿದೆ. ಮೃತದೇಹ ಮಹಜರಿಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಬಾರಿಯ ಎಸ್ಎಸ್ಎಲ್ಸಿ
ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ ಎ ಪ್ಲಸ್ ಪಡೆದಿದ್ದ ಈಕೆ ಪ್ರಥಮ ಪಿಯುಸಿಗೆ ಸೇರಲು ತಯಾರಿ ನಡೆಸುತ್ತಿದ್ದಳು ಎನ್ನಲಾಗಿದೆ.
ತಂದೆ ಡ್ರೈವರ್ ವೃತ್ತಿ ಮಾಡುತ್ತಿದ್ದು, ತಾಯಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಉದ್ಯೋಗಿ. ಮೃತ ವಿದ್ಯಾರ್ಥಿನಿ ತಂದೆ, ತಾಯಿ, ಮತ್ತು ಒಬ್ಬ ಸಹೋದರನನ್ನ ಅಗಲಿದ್ದಾರೆ.
