ಸ್ಯಾಂಡಲ್ವುಡ್ ಪವರ್ಸ್ಟಾರ್ ನಟ ಪುನೀತ್ ರಾಜ್ ಕುಮಾರ್ ಲಘು ಹೃದಯಾಘಾತದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ ಗೆ ಅನಾರೋಗ್ಯವಾಗಿದ್ದು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಪುನೀತ್ ರಾಜ್ ಕುಮಾರ್ ಗೆ ಲಘು ಹೃದಯಾಘಾತ ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮನೆಯಲ್ಲಿರುವ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಆರೋಗ್ಯದಲ್ಲಿ ಏರು ಪೇರಾಗಿತ್ತು ಎಂದು ತಿಳಿದುಬಂದಿದೆ. ಜಿಮ್ ಮಾಡುವಾಗ ನಟ ಪುನೀತ್ ಅಲ್ಲಿಯೇ ಕುಸಿದು ಬಿದ್ದಿದ್ದರು. ತಕ್ಷಣ ಅವರ ಆಪ್ತ ಸಹಾಯಕರು ನಟನನ್ನು ಆಸ್ಪತ್ರೆಗೆ ಕರೆತಂದಿದ್ದಾರೆ ಎಂದು ಮಾಹಿತಿ ಸಿಕ್ಕಿದೆ. ವಿಕ್ರಂ ಆಸ್ಪತ್ರೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಸೋಮೆಂದು ಮುಖರ್ಜಿ, ಡಿಸಿಪಿ ಅನುಚೇತ್ ದೌಡಾಯಿಸಿದ್ದಾರೆ.
ಸದ್ಯ ಆಸ್ಪತ್ರೆಯ ಸುತ್ತ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗುತ್ತಿದೆ. ನಟನ ಅಭಿಮಾನಿಗಳು, ಆಪ್ತರು, ಸಿನಿ ಗಣ್ಯರು, ಕುಟುಂಬಸ್ಥರು ಹಾಗೂ ಸ್ನೇಹಿತರು ಸೇರಿ ಆಸ್ಪತ್ರೆ ಸುತ್ತ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇದ್ದು ಮತ್ತಷ್ಟು ಸಿಬ್ಬಂದಿಯನ್ನು ಸ್ಥಳಕ್ಕೆ ಕರೆತರಲಾಗಿದೆ.
