ವರದಿ ಮತ್ತು ಚಿತ್ರಗಳು : ಅಂತರ್ಜಾಲ
ಟಿ20 ಕ್ರಿಕೆಟ್ | ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ | ಸರಣಿ ವಶ
November 20, 2021
0
ಭಾರತ ಹಾಗೂ ನ್ಯೂಜಿಲೆಂಡ್ ತಂಡದ ನಡುವಿನ ಟಿ20 ಸರಣಿಯಲ್ಲಿ ಭಾರತ ಸರಣಿಯನ್ನು ಗೆದ್ದುಕೊಂಡಿದೆ. ಎರಡನೇ ಟಿ20 ಪಂದ್ಯದಲ್ಲೂ ಭಾರತ ಸರ್ವಾಂಗೀಣ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದು ಅರ್ಹ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ಪಡೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಎರಡು ಪಂದ್ಯಗಳನ್ನು ಗೆದ್ದುಕೊಂಡಿದ್ದು ಇನ್ನೂ ಒಂದು ಪಂದ್ಯ ಇರುವಂತೆಯೇ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಇನ್ನು ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ ಅದ್ಭುತವಾಗಿತ್ತು. ಬೌಲಿಂಗ್ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ಹರ್ಷಲ್ ಪಟೇಲ್ 2 ವಿಕೆಟ್ ಕೀಳುವ ಮೂಲಕ ಅಂತಾರಾಷ್ಟ್ರೀಯ ವೇದಿಕೆಯಲ್ಲಿಯೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಇದರ ಜೊತೆಗೆ ಅನುಭವಿ ಆರ್ ಅಶ್ವಿನ್ ನಡೆಸಿದ ಬೌಲಿಂಗ್ ದಾಳಿಗೆ ಎದುರಾಳಿ ತಂಡದ ದಾಂಡಿಗರು ರನ್ಗಳಿಸಲು ಅಕ್ಷರಶಃ ಪರದಾಡಿದರು. ಆರ್ ಅಶ್ವಿನ್ ಬೌಲಿಂಗ್ ದಾಳಿಯ ಬಗ್ಗೆ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆಗಳು ವ್ಯಕ್ತವಾಗಿದೆ.
Tags
