ಪಡುಕುತ್ಯಾರು : ಯಕ್ಷಗಾನ ಕರಾವಳಿಯ ಗಂಡುಕಲೆ, ಪುರಾಣಗಳು, ಅದರ ಪಾತ್ರಗಳು ಕರಾವಳಿಯ ಜನಮನದಲ್ಲಿ ಉಳಿದಿದೆ ಎಂದರೆ ಅದಕ್ಕೆ ಮೂಲ ಕಾರಣ ಯಕ್ಷಗಾನವಾಗಿದೆ ಎಂದು ಆನೆಗುಂದಿ ಮಹಾಸಂಸ್ಥಾನ ಶ್ರೀ ಸರಸ್ವತೀ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ನುಡಿದರು.
ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಪಡುಕುತ್ಯಾರು ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಭಾನುವಾರ ನಡೆದ ರಾಮಾಯಣ ಯಕ್ಷಗಾನ ತಾಳಮದ್ದಳೆ ಸಪ್ತಾಹ 2021 ರ ಸಮಾರೋಪ ಹಾಗೂ ಹಿರಿಯ ಯಕ್ಷಗಾನ ಕಲಾವಿದರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಯಕ್ಷಗಾನ ಕಲಾವಿದರು ಪುರಾಣವನ್ನು ಚೆನ್ನಾಗಿ ಅಧ್ಯಯನ ಮಾಡಿಕೊಂಡು ಅಂತರ್ಗತಗೊಳಿಸಿ ರಂಗಸ್ಥಳದ ಮೇಲೆ ಮನೋಜ್ಞವಾಗಿ ಅಭಿವ್ಯಕ್ತಿ ಪಡಿಸುತ್ತಾರೆ. ಜನರ ಮನಸ್ಸಿಗೆ ಮುಟ್ಟುವ ಹಾಗೆ ವಿವರಿಸುತ್ತಾರೆ. ಕಳೆದ 7 ದಿನಗಳ ಕಾಲ ಕಲಾವಿದರು ಶ್ರದ್ಧಾಪೂರ್ವಕವಾಗಿ ಕಲಾಸೇವೆಯನ್ನು ಮಾಡಿದ್ದಾರೆ. ಮುಂದೆಯೂ ಮಠದ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳು ಯೋಜನೆಗಳು ಇದೆ ಎಂದು ಅವರು ನುಡಿದರು.
ಹಿರಿಯ ಯಕ್ಷಗಾನ ಕಲಾವಿದರಾದ ವಾಸುದೇವ ಆಚಾರ್ಯ ಕುಳಾಯಿ, ವಸಂತ್ ಆಚಾರ್ಯ ಕಾರ್ಕಳ, ರಮೇಶ್ ಆಚಾರ್ಯ ಕಾವೂರು, ರಾಜು ಶೆಟ್ಟಿ, ಕೊಳ್ಯಾರು, ಮನೋಹರ್ ಕುಂದರ್ ಎರ್ಮಾಳ್, ಭಾಸ್ಕರ್. ಕೆ. ಪಡುಬಿದ್ರಿ, ವಾದಿರಾಜ ಕಲ್ಲುರಾಯ ಹಾಗೂ ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಗಳಿಸಿದ ಮಂಗಳೂರು ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಎಸ್.ಆರ್. ಹರೀಶ್ ಆಚಾರ್ಯ ಅವರನ್ನು ಅಭಿನಂದಿಸಲಾಯಿತು.
ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ವಡೇರಹೋಬಳಿ ಅಧ್ಯಕ್ಷತೆ ವಹಿಸಿದ್ದರು. ಕುತ್ಯಾರು ಗ್ರಾಪಂ ಅಧ್ಯಕ್ಷೆ ಲತಾ ಎಸ್.ಆಚಾರ್ಯ, ಪಡುಕುತ್ಯಾರು ಶ್ರೀ ನಾಗಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನೀ ಪಾಠ ಶಾಲಾ ಪ್ರಧಾನ ಸಂಚಾಲಕ ಬಿ.ಸೂರ್ಯಕುಮಾರ್ ಆಚಾರ್ಯ ಹಳೆಯಂಗಡಿ, ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ರೂಪೇಶ್ ಆಚಾರ್ಯ ಶಿರ್ವ, ಆನೆಗುಂದಿ ಶ್ರೀ ಸರಸ್ವತೀ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷ ಟಿ. ಸುಧಾಕರ ಆಚಾರ್ಯ ತ್ರಾಸಿ, ಶ್ರೀ ಸರಸ್ವತೀ ಗೋವು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಜಯಕರ ಆಚಾರ್ಯ ಕರಂಬಳ್ಳಿ, ಶ್ರೀ ಸರಸ್ವತೀ ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ,
ಆನೆಗುಂದಿ ಪ್ರತಿಷ್ಠಾನ ಉಪಾಧ್ಯಕ್ಷ ಶಿಲ್ಪಿ ರಾಮಚಂದ್ರ ಆಚಾರ್ಯ ಕಾರ್ಕಳ, ಮಾಧ್ಯಮ ವಿಭಾಗ ಮುಖ್ಯಸ್ಥ.ವೈ ಧರ್ಮೇಂದ್ರ ಆಚಾರ್ಯ, ಆನೆಗುಂದಿ ಪ್ರತಿಷ್ಠಾನ ರ ವಿಶ್ವಸ್ಥರಾದ ಪಿ. ವಿ ಗಂಗಾಧರ ಆಚಾರ್ಯ ಉಡುಪಿ, ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ಬೆಳುವಾಯಿ, ಮಧುಕರ ಚಂದ್ರ ಶೇಖರ ಆಚಾರ್ಯ ಗೋಕರ್ಣ, ಶ್ರೀಧರ ಆಚಾರ್ಯ ಪನ್ವೇಲ್ ಮುಂಬೈ, ಪುರೋಹಿತ ಜಯಕರ ಆಚಾರ್ಯ ಮೂಡುಬಿದಿರೆ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮ ಬಳಿಕ ಶ್ರೀರಾಮ ನಿರ್ಯಾಣ ಯಕ್ಷಗಾನ ತಾಳಮದ್ದಳೆ ಸಂಪನ್ನಗೊಂಡಿತು. ಕಾರ್ಯಕ್ರಮ ಸಂಯೋಜಕರಾದ ಕನ್ಯಾನ ಜನಾರ್ದನ ಆಚಾರ್ಯ ಅವರು ಸನ್ಮಾನಿತರ ಪರಿಚಯ ಮಾಡಿದರು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ. ಆಚಾರ್ ಕಂಬಾರು ಕಾರ್ಯಕ್ರಮ ನಿರೂಪಿಸಿದರು.
ವರದಿ : ರತನ್ ಕುಮಾರ್ ಹೊಸಂಗಡಿ
