ನೀರ್ಚಾಲು : ಭಾರತೀಯ ಜನತಾ ಪಕ್ಷ ಬದಿಯಡ್ಕ (ಪಶ್ಚಿಮ ವಲಯ) ಸಮಿತಿಯ ವತಿಯಿಂದ ಉಚಿತ ಗ್ಯಾಸ್ ಸಂಪರ್ಕದ ವಿತರಣಾ ಕಾರ್ಯಕ್ರಮವು ನೀರ್ಚಾಲಿನ ಕುಮಾರಸ್ವಾಮಿ ಭಜನಾ ಮಂದಿರದಲ್ಲಿ ಜರಗಿತು.
ಕಾರ್ಯಕ್ರಮದಲ್ಲಿ ಬದಿಯಡ್ಕ ಪಶ್ಚಿಮ ವಲಯ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಅಶ್ವಿನಿ ಭಟ್ ಅಧ್ಯಕ್ಷತೆ ವಹಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ರವೀಶ ತಂತ್ರಿ ಕುಂಟಾರು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಂಡಲ ಅಧ್ಯಕ್ಷರಾದ ಹರೀಶ್ ನಾರಂಪಡಿ, ಮಂಡಲ ಪ್ರದಾನ ಕಾರ್ಯದರ್ಶಿ ಪಿ ಆರ್ ಸುನಿಲ್, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಸದಸ್ಯೆ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಶೈಲಜ ಭಟ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಸೌಮ್ಯ ಮಹೇಶ್, ಮಂಡಲ ಕರ್ಷಕ ಮೋರ್ಚಾದ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ , ಬಾಲಸುಬ್ರಹ್ಮಣ್ಯ ಭಟ್, ನವೀನ್ ನೀರ್ಚಾಲು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಮೊದಲಿಗೆ ಇತ್ತೀಚೆಗೆ ನಿಧನರಾದ ಕೊಡುಗೈದಾನಿ ಕಿಳಿಂಗಾರು ಗೋಪಾಲ ಕೃಷ್ಣ ಭಟ್ ಅವರಿಗೆ ಪುಷ್ಪಾರ್ಚನೆಗೈದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ನೂರಕ್ಕಿಂತಲೂ ಹೆಚ್ಚು ಫಲಾನುಭವಿಗಳಿಗೆ ಗ್ಯಾಸ್ ಸಂಪರ್ಕ ವಿತರಿಸಲಾಯಿತು .
