ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು ಶೀಘ್ರ ಆರಂಭವಾಗಬೇಕು, ಮುಂದಿನ ಆದೇಶದವರೆಗೆ ಧಾರ್ಮಿಕ ಗುರುತುಗಳನ್ನು ಬಳಸುವಂತಿಲ್ಲ ಹೈಕೋರ್ಟ್ ತ್ರಿಸದಸ್ಯ ಪೀಠ
February 10, 2022
0
ಬೆಂಗಳೂರು : ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಜಟಾಪಟಿಗೆ ತ್ರಿಸದಸ್ಯರನ್ನೊಳಗೊಂಡ ಕರ್ನಾಟಕ ಹೈಕೋರ್ಟ್ ಬ್ರೇಕ್ ಹಾಕಿದೆ. ಹಿಜಾಬ್ ಸಂಘರ್ಷ ಪ್ರಕರಣ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು (ಗುರುವಾರ) ಮಧ್ಯಂತರ ಆದೇಶ ಹೊರಡಿಸಿದ್ದು, ಅಂತಿಮ ಆದೇಶ ನೀಡುವವರೆಗೆ ಯಾವುದೇ ಧಾರ್ಮಿಕ ಉಡುಗೆಗೆ ಅವಕಾಶ ಇಲ್ಲ ಎಂದು ಆದೇಶ ನೀಡಿದೆ. ಅಲ್ಲದೇ ತಕ್ಷಣವೇ ಶಾಲೆ-ಕಾಲೇಜು ಪ್ರಾರಂಭಿಸಿ ಎಂದು ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು ಶೀಘ್ರ ಆರಂಭವಾಗಬೇಕು. ಮುಂದಿನ ಆದೇಶದವರೆಗೆ ಧಾರ್ಮಿಕ ಗುರುತುಗಳನ್ನು ಬಳಸುವಂತಿಲ್ಲ. ಕೇಸರಿ ಶಾಲು ಅಥವಾ ಹಿಜಾಬ್ ಧರಿಸಿ ಶಾಲೆಗಳಿಗೆ ಹೋಗುವಂತಿಲ್ಲ ಎಂದು ನ್ಯಾಯಾಲಯವು ಮೌಖಿಕ ಆದೇಶದಲ್ಲಿ ತಿಳಿಸಿ ಪ್ರಕರಣವನ್ನು ಸೋಮವಾರಕ್ಕೆ (ಫೆ.15) ಮುಂದೂಡಿದೆ. ರಾಜ್ಯದಲ್ಲಿ ಶಾಂತಿ ನೆಮ್ಮದಿ ಮರಳಬೇಕು.ಕೆಲವು ದಿನಗಳ ಕಾಲ ನೀವು ನಿಮ್ಮ ನಂಬಿಕೆ ಬಿಡುವುದು ಒಳ್ಳೆಯದು. ಕೆಲವೇ ದಿನಗಳಲ್ಲಿ ಅಂತಿಮ ತೀರ್ಪು ಪ್ರಕಟಿಸುತ್ತೇವೆ. ಅಲ್ಲಿಯವರೆಗೆ ಧಾರ್ಮಿಕ ಗುರುತುಗಳನ್ನ ಬಳಸಬಾರದು ಎಂದು ಹೈಕೋರ್ಟ್ ಹೇಳಿದೆ.
Tags
