ಮಂಜೇಶ್ವರ : ಹತ್ತೂರ ಒಡೆಯ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವದ ಕೊನೆಯ ದಿನವಾದ ಇಂದು ಬೆಳಗ್ಗೆ ವೀರಮಂಗಲದ ಕುಮಾರಧಾರ ನದಿ ತಟದಲ್ಲಿ ಶ್ರೀ ದೇವರ ಅವಭೃತ ಸ್ನಾನ ವಾಗಿ ಹಿಂತಿರುಗುವ ವೇಳೆ ಧಾರ್ಮಿಕ, ಸಾಮಾಜಿಕ ಮುಂದಾಳು ಶ್ರೀ ರತನ್ ಕುಮಾರ್ ಹೊಸಂಗಡಿ ಸಾರಥ್ಯದಲ್ಲಿ "ಪುತ್ತೂರು ಶ್ರೀ ಮಹಾಲಿಂಗೇಶ್ವರ ಭಕ್ತವೃಂದ ಮಂಜೇಶ್ವರ" ಇವರಿಂದ ಉಪಹಾರದ ವ್ಯವಸ್ಥೆಯನ್ನು ಮಾಡಲಾಯಿತು. ಸಹಸ್ರಾರು ಮಂದಿ ಭಕ್ತರು ಉಪಹಾರವನ್ನು ಸ್ವೀಕರಿಸಿ ಕೃತಜ್ಞತರಾದರು.

