ನವದೆಹಲಿ : ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನಿಂದ ಪಾರಾಗಲು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಸಿಎಂ ಉದ್ಧವ್ ಠಾಕ್ರೆ ಸರ್ಕಾರಕ್ಕೆ ಹಿನ್ನೆಡೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇದರಿಂದ ಎರಡೂವರೆ ವರ್ಷದ ಮೈತ್ರಿ ಸರ್ಕಾರ ಪತನವಾಗಿದೆ. ರಾಜ್ಯಪಾಲರು ನೀಡಿದ್ದ ವಿಶ್ವಾಸಮತ ಯಾಚನೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಠಾಕ್ರೆಗೆ ವಿಶ್ವಾಸ ಮತ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿ ನಾಳೆಯೇ ವಿಶ್ವಾಸ ಮತಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಫೇಸ್ಬುಕ್ ಲೈವ್ನಲ್ಲಿ ವಿಶ್ವಾಸ ಮತದ ಮೊದಲೇ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕಾರ ಮಾಡಿದ್ದಾರೆ. ಇದರಿಂದ 32ತಿಂಗಳ (ಶಿವಸೇನೆ, ಎನ್ಸಿಪಿ, ಕಾಂಗ್ರೆಸ್) ಮೈತ್ರಿ ಸರಕಾರ ಪತನವಾಗಿದೆ. ಇದರೊಂದಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಉದ್ಧವ್ ಠಾಕ್ರೆ | ಮಹಾರಾಷ್ಟ್ರ ಮೈತ್ರಿ ಸರ್ಕಾರ ಪತನ
June 29, 2022
0

Tags

.jpeg)