ಮಧೂರು : ಮಧೂರು ಪಂಚಾಯತ್ ಮತ್ತು ಕುಟುಂಬಶ್ರೀ ನೇತೃತ್ವದಲ್ಲಿ ನಡೆಯುವ ಮಳೆ ಕೊಯ್ಲು ಕಾರ್ಯಕ್ರಮವು ಇದೇ ಬರುವ ದಿನಾಂಕ 13ರಂದು ಮಧೂರು ಪಂಚಾಯತ್ 20ನೇ ವಾರ್ಡ್ ಸಿರಿಬಾಗಿಲಿನಲ್ಲಿ ನಡೆಯಲಿರುವುದು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷರಾದ ಗೋಪಾಲಕೃಷ್ಣ ಕೂಡ್ಲು ನೆರವೇರಿಸುವರು. ಅಲ್ಲದೇ ವಿವಿಧ ಗಣ್ಯರು ಉಪಸ್ಥಿತರಿರುವರು. ಎಂದು ಮತ್ತು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಪಂಚಾಯತ್ ಸದಸ್ಯರಾದ ಉದಯ ಕುಮಾರ್ರವರ ನೇತೃತ್ವದ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

