ರಾಜಕೀಯವಾಗಿ, ಸಾಮಾಜಿಕವಾಗಿ ಸಕ್ರೀಯರಾಗಿದ್ದ ಪ್ರವೀಣ್, ಸ್ಥಳೀಯ ಪರಿಸರದಲ್ಲಿ ಜನಾನುರಾಗಿಯಾಗಿದ್ದರು. ಕೋಳಿ ಉದ್ಯಮ ನಡೆಸಿಕೊಂಡಿದ್ದ ಇವರು ಮಂಗಳವಾರ ರಾತ್ರಿ ಬೈಕ್ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳ ಮಚ್ಚಿನೇಟಿಗೆ ಬಲಿಯಾಗಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ಮಾಹಿತಿ ಸಂಗ್ರಹಿಸಿರುವ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪುತ್ತೂರುನಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಪುತ್ತೂರು, ಕಡಬ, ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್
ಈ ಬಗ್ಗೆ ಮಾತನಾಡಿದ ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆ ನಾಳೆ ಪುತ್ತೂರು, ಕಡಬ, ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ನಡೆಸಲಾಗುವುದು., ಈ ಕೃತ್ಯಕ್ಕೆ ಪ್ರೇರಣೆ ನೀಡಿದಂತಹ ಪಿ. ಎಫ್. ಐ. ಎಸ್. ಡಿ.ಪಿ. ಐ ನಾಯಕರನ್ನು ಬಂಧಿಸಬೇಕು., ಅಷ್ಟೇ ಅಲ್ಲದೇ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

