ಮಂಗಳೂರು : ಕರಾವಳಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಹಲವೆಡೆ ನೀರು ನುಗ್ಗಿದೆ. ಅಲ್ಲದೆ ಕೆಲವೆಡೆ ಗುಡ್ಡ ಕುಸಿತ ಉಂಟಾಗಿದ್ದು ಅದೃಷ್ಟಾವತ್ ಅಪಾಯದಿಂದ ಪಾರಾದ ಘಟನೆ ಮಂಗಳೂರಿನ ಪಡೀಲ್ ಸಮೀಪದ ಕಣ್ಣೂರು ಬಲ್ಲೂರು ಗುಡ್ಡೆ ಎಂಬಲ್ಲಿ ಇಂದು ನಡೆದಿದೆ. ಬಲ್ಲೂರು ಗುಡ್ಡೆ ನಿವಾಸಿ ಅಬ್ದುಲ್ ರೆಹ್ಮಾನ್ ಎಂಬುವವರ ಮನೆ ಸಮೀಪ ಗುಡ್ಡೆ ಕುಸಿತ ಉಂಟಾಗಿದೆ. ಅವರ ಮನೆಗೆ ತೆರಳುವ ಮೆಟ್ಟಿಲುಗಳು ಕುಸಿದಿದೆ. ಇನ್ನೂ ಕುಸಿಯುವ ಭೀತಿ ಉಂಟಾಗಿದೆ.
ಬಿರುಸಿನ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಗುರುವಾರ (ಜುಲೈ 7 )ದಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜು ಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.
ಎರಡೂ ಜಿಲ್ಲೆಗಳಲ್ಲಿ ಮಳೆ ಕುರಿತು ರೆಡ್ ಅಲರ್ಟ್ ಇರುವುದರಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.



