ಈ ಉದ್ಘಾಟನಾ ಸಮಾರಂಭವನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರು, ಕರ್ನಾಟಕ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಸನ್ಮಾನ ಶ್ರೀ ವಿ. ಸುನೀಲ್ ಕುಮಾರ್ ನಿರ್ವಹಿಸುವರು, ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾದ, ಸನ್ಮಾನ್ಯ ಶ್ರೀ ನಳಿನ್ ಕುಮಾರ್ ಕಟೀಲ್, ಮಂಗಳೂರು ಮಹಾ ನಗರ ಪಾಲಿಕೆಯ ಮಹಾ ಪೌರರಾದ ಸನ್ಮಾನ್ಯ ಶ್ರೀ ಜಯಾನಂದ ಅಂಚನ್ ವೇದಿಕೆಯಲ್ಲಿ ಉಪಸ್ಥಿತರಿವರು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಡಿ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ ಭಾಆಸೇ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ಅಕ್ಷಯ್ ಶ್ರೀಧರ್, ಭಾ.ಆ.ಸೇ, ಮಂಗಳೂರು ಮಹಾನಗರ ಪಾಲಿಕೆಯ ಮಾನ್ಯ ಉಪಮಹಾಪೌರರಾದ ಶ್ರೀಮತಿ ಪೂರ್ಣಿಮಾ ಆಗಮಿಸುವರು. ಮಂಗಳೂರು ಸ್ಮಾರ್ಟ್ ಸಿಟಿ ಮಂಡಳಿ ಸದಸ್ಯರು ಮತ್ತು - ನಗರ ಮಟ್ಟದ ಸಲಹಾ ಸಮಿತಿ ಸದಸ್ಯರುಗಳು, ಮಂಗಳೂರು ಮಹಾನಗರ ಪಾಲಿಕೆಯ ಎಲ್ಲಾ ಸದಸ್ಯರು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರುಗಳು ಮಂಗಳೂರು ಸ್ಟಾರ್ಟ್ ಸಿಟಿ ಲಿಮಿಟೆಡ್ ಇದರ ವ್ಯವಸ್ಥಾಪಕ ನಿರ್ದೇಶಕರು,
ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿರುವರು.
ವರದಿ ಮತ್ತು ಚಿತ್ರಗಳು : ವಂಶಿ ಪಂಡಿತ್ ಕಣ್ಣೂರು











