ಮಂಗಳೂರು: ನಗರದ ನಂತೂರು ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ವೇಳೆಗೆ ಭೀಕರ ಅಪಘಾತ ನಡೆದಿದ್ದು ಸ್ಥಳದಲ್ಲೇ ಇಬ್ಬರು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರದಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ - ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ನಿವಾಸಿಗಳು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ನಂತೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
