ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹೊಸಂಗಡಿ | 43ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವದ ಆಮಂತ್ರ ಪತ್ರಿಕೆ ಬಿಡುಗಡೆ
August 23, 2023
0
ಮಂಜೇಶ್ವರ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಜರಗಲಿರುವ 43ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವದ ಆಮಂತ್ರ ಪತ್ರಿಕೆ ಬಿಡುಗಡೆ ಸಮಾರಂಭ ಇಂದು ಬೆಳಿಗ್ಗೆ ಕ್ಷೇತ್ರದಲ್ಲಿ ಜರಗಿತು. ಕ್ಷೇತ್ರದಲ್ಲಿ ಆರಾಧಿಸಲ್ಪಡುವ ದೇವರುಗಳಿಗೆ ಕ್ಷೇತ್ರದ ಪ್ರಧಾನ ಅರ್ಚಕರಾದ ಪುರೋಹಿತ ತಿರುಮಲೇಶ ಆಚಾರ್ಯರವರು ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಕನಿಲ ಶ್ರೀ ಭಗವತಿ ಕ್ಷೇತ್ರದ ಗುರಿಕಾರರಾದ ಪುರುಷೋತ್ತಮ ಗುರಿಕಾರ ದುರ್ಗಿಪಳ್ಳರವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಈ ವೇಳೆ ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ನವೀನ್ ರಾಜ್ ಕೆ.ಜೆ, ಪ್ರಧಾನ ಕಾರ್ಯದರ್ಶಿ ಅವಿನಾಶ್ ಹೆಗ್ಡೆ ಮಂಜೇಶ್ವರ, ಕೋಶಾಧಿಕಾರಿ ಚಿನ್ಮಯಾನಂದ ಆಚಾರ್ಯ ಹೊಸಮನೆ, ಕಾಳಿಕಾಂಬ, ಪ್ರದಾನ ಸಂಚಾಲಕ ಪದ್ಮನಾಭ ಕಡಪ್ಪರ, ಸಂಘಟನಾ ಕಾರ್ಯದರ್ಶಿ ಹರೀಶ್ ಶೆಟ್ಟಿ ಮಾಡ, ಗೌರವ ಸಲಹೆಗಾರರಾದ ದಿನಕರ್ ಬಿ.ಎಂ, ಹೈಮೇಶ ಬಿ.ಎಂ, ದೇವರಾಜ್ ಎಂ.ಎಸ್, ಶ್ರೀ ಕೃಷ್ಣ ಶಿವಕೃಪಾ ಕುಂಜತ್ತೂರು, ಉಪಾಧ್ಯಕ್ಷರಾದ ಸುನಿಲ್ ಕುಮಾರ್ ಹೊಸಂಗಡಿ, ಶಿವಪ್ರಸಾದ್ ಪೆಲಪ್ಪಾಡಿ, ಸುರೇಶ್ ಗಾಣಿoಜಾಲ್, ದಯಪ್ರಸನ್ನ ಆಚಾರ್ಯ, ರಮೇಶ್ ಬಿ.ಎಂ, ನವೀನ್ ಅಡಪ ಹೊಸಬೆಟ್ಟು, ಕೃಷ್ಣಪ್ಪ ಪೂಜಾರಿ, ದತ್ತಾತ್ರೇಯ ಶೆಣೈ, ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಈ ಬಾರಿಯ 43ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ ತಿಂಗಳ 19 ರಿಂದ ಮೊದಲ್ಗೊಂಡು 22 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿಂದ ಜರುಗಲಿದೆ. ಸಮಿತಿಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಹೆಗ್ಡೆ ಮಂಜೇಶ್ವರ ಸ್ವಾಗತಿಸಿ, ಕೋಶಾಧಿಕಾರಿ ಚಿನ್ಮಯಾನಂದ ಆಚಾರ್ಯ ವಂದಿಸಿದರು.
Tags

