ಪತಿ ವಿಜಯ್ ಜತೆ ಬ್ಯಾಂಕಾಕ್ಗೆ ಸ್ಪಂದನಾ ತೆರಳಿದ್ದು, ಅಲ್ಲಿಯೇ ಹೃದಯಾಘಾತವಾಗಿದೆ. ದಂಪತಿ ಇನ್ನೇನು ಕೆಲವೇ ದಿನಗಳಲ್ಲಿ 16ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿತ್ತು.
ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿ ಸ್ಪಂದನಾ ಹಾಗೂ ನಟ ವಿಜಯ್ ರಾಘವೇಂದ್ರ ಪ್ರೀತಿಸಿ ಮದುವೆಯಾದವರು. ಇವರಿಗೆ ಶೌರ್ಯ ಎಂಬ ಪುತ್ರನಿದ್ದಾನೆ. ವಿಜಯ್ ಹಾಗೂ ಶೌರ್ಯನಿಗೆ ಈ ದುಃಖವನ್ನು ಸಹಿಸುವ ಶಕ್ತಿ ದೇವರು ನೀಡಲಿ ಎಂದು ಅಭಿಮಾನಿಗಳು ಕಣ್ಣೀರಿಟ್ಟಿದ್ದಾರೆ.
ನಟಿ, ನಿರ್ಮಾಪಕಿಯಾಗಿದ್ದ ಸ್ಪಂದನಾ
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ದಿಢೀರ್ ಹೃದಯಾಘಾತದಿಂದ ಮೃತಪಟ್ಟಿರುವುದು ಸ್ಯಾಂಡಲ್ವುಡ್ಗೆ ದೊಡ್ಡ ಆಘಾತ ತಂದಿದೆ. ಬೆಂಗಳೂರಿನ ಸ್ಟೆಲ್ಲಾ ಮೆರೀಸ್ ಹೈಸ್ಕೂಲ್ನಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ್ದ ಸ್ಪಂದನಾ ಅವರು, ಮಲ್ಲೇಶ್ವರಂನಲ್ಲಿ ಎಂಇಎಸ್ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ಬಳಿಕ ಅಪೂರ್ವ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟಿದ್ದರು, ವಿಜಯ್ ರಾಘವೇಂದ್ರ ನಟಿಸಿ, ನಿರ್ದೇಶಿಸಿದ್ದ ಕಿಸ್ಮಾತ್ ಸಿನಿಮಾವನ್ನು ಸ್ಪಂದನಾ ನಿರ್ಮಾಣ ಮಾಡಿದ್ದರು.

