ಮಂಗಳೂರು: ಹೃದಯಾಘಾತ ಸಂಭವಿಸಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.
ಸುಮಾ(19) ಮೃತ ವಿದ್ಯಾರ್ಥಿನಿ, ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ಸುಮಾಗೆ ಆಗಾಗ ಆರೋಗ್ಯ ಸಮಸ್ಯೆ ಕಾಡುತ್ತಿತ್ತು ಎನ್ನಲಾಗಿದೆ.
ಕೆಲ ದಿನಗಳ ಹಿಂದೆ ಸುಮ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿದ್ದರು. ಆಗಸ್ಟ್ 9 ರಂದು ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಆ.11 ರಂದು ಮತ್ತೆ ಆರೋಗ್ಯ ಹದಗೆಟ್ಟಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಇನ್ನೇನು ಆರೋಗ್ಯ ಸರಿಯಾಯ್ತು ಎನ್ನವಷ್ಟರಲ್ಲಿ ಮತ್ತೆ ಆ.14 ರಂದು ಸಂಜೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

