ಉಳ್ಳಾಲ : ಬೇಡಿಕೆ ಈಡೇರಿದಕ್ಕೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ನ ಕನಸಿನ ರಾಣಿ ಖ್ಯಾತ ನಟಿ ಮಾಲಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.
ಈ ವೇಳೆ ಮಾತನಾಡಿದ ಮಾಲಾಶ್ರೀ ಅವರು ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆನು. ಎಲ್ಲವೂ ಅಚಾತುರ್ಯವೆಂಬಂತೆ ನಡೆಯಿತು. ಕ್ಷೇತ್ರದ ಶಕ್ತಿಯನ್ನು ಹೇಳತೀರದು. ಬಹಳಷ್ಟು ಪಾಸಿಟಿವ್ ಎನರ್ಜಿ ಕ್ಷೇತ್ರದಲ್ಲಿದೆ. ಒಳಗೆ ಹೋಗುವಾಗಲೇ ಸಾನಿಧ್ಯದ ಶಕ್ತಿ ಭಾಸವಾಗುತ್ತದೆ. ಬೇಡಿಕೆ ಈಡೇರಿದ ಹಾಗೆ ಹರಕೆ ತೀರಿಸಿ ಮತ್ತೆ ಆಶೀರ್ವಾದ ಪಡೆಯುವ ಉದ್ದೇಶದಿಂದ ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಬಂದಿದ್ದೇನೆ. ಮುಂದೆಯೂ ಬರುತ್ತಿರುತ್ತೇನೆ ಎಂದರು.
ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ ಆದಿ ಕೊರಗತನಿಯ ಸೇವಾ ಟ್ರಸ್ಟ್ನ ಟ್ರಸ್ಟಿಗಳು ನಟಿ ಮಾಲಶ್ರೀ ಹಾಗೂ ಪುತ್ರಿಯನ್ನು ಸನ್ಮಾನಿಸಿದರು.
