ಬೆಂಗಳೂರು : ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.
ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರು ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ನೂತನ ರಾಜ್ಯಾಧ್ಯಕ್ಷರನ್ನ ಆಯ್ಕೆ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ಬಿ ವೈ ವಿಜಯೇಂದ್ರ ಅವರಿಗೆ ದೀಪಾವಳಿ ಗಿಫ್ಟ್ ನೀಡಿದೆ.
ಇನ್ನೂ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ಬಿಜೆಪಿ ನಾಯಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಕೇಳಿ ಬಂದಿತ್ತು.
ಅಲ್ಲದೇ 2024 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವುದು ಬಿಜೆಪಿ ಅನಿವಾರ್ಯವಾಗಿದ್ದು, ಬಿ ಎಸ್ ಯಡಿಯೂರಪ್ಪ ಅವರ ಅನಿವಾರ್ಯತೆ ಬಿಜೆಪಿ ಬಹುಮುಖ್ಯವಾಗಿದೆ. ಹೀಗಾಗಿ ಯಡಿಯೂರಪ್ಪ ಅವರನ್ನ ಪಕ್ಷದಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಹೈಕಮಾಂಡ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನ ನೀಡಿದೆ.
2023 ರ ವಿಧಾನಸಭಾ ಚುನಾವಣೆ ಮುನ್ನ ಮುಖ್ಯಮಂತ್ರಿ ಸ್ಥಾನದಿಂದ ಬಿ ಎಸ್ ಯಡಿಯೂರಪ್ಪ ಅವರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದ ಕಾರಣಕ್ಕೆ ಪಕ್ಷಕ್ಕೆ ಹಿನ್ನಡೆಯಾಗಿದೇ ಎಂದು ಬಿಜೆಪಿ ಬಹುತೇಕ ನಾಯಕರು ಬಹಿರಂಗವಾಗಿ ಅಸಮಾಧಾನ ಹೊರಹಾಕಿತ್ತು. ಅಲ್ಲದೇ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೂ ಸಹ ಯಡಿಯೂರಪ್ಪ ಅವರನ್ನ ಸಹ ಪಕ್ಷದ ಕಾರ್ಯಕ್ರಮದಿಂದ ಕಡೆಗಣಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಇನ್ನೂ ಇದೆ ರೀತಿಯ ಸನ್ನಿವೇಶ ಲೋಕಸಭಾ ಚುನಾವಣೆಯಲ್ಲೂ ಸೃಷ್ಟಿಯಾಗಬಹುದು ಎಂದು ಬಿಜೆಪಿ ಹೈಕಮಾಂಡ್ ನಾಯಕ ಲೆಕ್ಕಚಾರವಾಗಿದ್ದು, ಯಡಿಯೂರಪ್ಪ ಅವರ ಅಸಮಾಧಾನವನ್ನ ಶಮನಗೊಳಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟವನ್ನ ನೀಡಿದ್ದಾರೆ ಎನ್ನಲಾಗಿದೆ.

.jpeg)
