ಇಂಗ್ಲೆಂಡ್ ಬಗ್ಗುಬಡಿದು ದಶಕದ ಬಳಿಕ ಫೈನಲ್ ಗೆ ಲಗ್ಗೆಯಿಟ್ಟ ಭಾರತ
June 28, 2024
0
ಗಯಾನ: ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ದೊಡ್ಡ ಅಂತರದಲ್ಲಿ ಮಣಿಸಿ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಸಮಯೋಚಿತ ಬ್ಯಾಟಿಂಗ್ ಹಾಗೂ ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ ಚಾಣಾಕ್ಷ ಸ್ಪಿನ್ ಬೌಲಿಂಗ್ ನೆರವಿನಿಂದ ಇಂಗ್ಲೆಂಡ್ ಎದುರು ಸೆಮಿಫೈನಲ್ನಲ್ಲಿ ಭಾರತ 68 ರನ್ ಅಂತರದ ಗೆಲುವು ದಾಖಲಿಸಿ ಲಗ್ಗೆಯಿಟ್ಟಿದೆ. ಈ ಗೆಲುವಿನೊಂದಿಗೆ 2022ರ ಟಿ20 ವಿಶ್ವಕಪ್ ಸೆಮಿಫೈನಲ್ನ ಸೋಲಿಗೆ ಸೇಡು ತೀರಿಸಿಕೊಳ್ಳಲುವಲ್ಲಿ ಭಾರತ ಯಶಸ್ವಿಯಾಗಿದೆ.ಗೆಲ್ಲಲು 172 ರನ್ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು ಕೇವಲ 103 ರನ್ಗಳಿಗೆ ಸರ್ವಪತನ ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಇದೀಗ ಭಾರತ ತಂಡವು ಜೂನ್ 29ರಂದು ಪ್ರಶಸ್ತಿಗಾಗಿ ದಕ್ಷಿಣ ಆಫ್ರಿಕಾ ಎದುರು ಕಾದಾಡಲಿದೆ.
Tags

