ಮಂಗಳೂರು : ಮಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ಮಣ್ಣು ಕುಸಿತ ಉಂಟಾಗಿದೆ. ಈ ವೇಳೆ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿರುವ ಘಟನೆ ಮಂಗಳೂರಿನ ಬಲ್ಮಠದಲ್ಲಿ ನಡೆದಿದೆ. ಹೌದು ಮಣ್ಣು ಕುಸಿತ ಆಗಿ ಇಬ್ಬರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದಾರೆ. ಮಂಗಳೂರಿನ ನಗರದ ಬಲ್ಮಠದಲ್ಲಿ ನಡೆದ ಘಟನೆಯಾಗಿದೆ. ಓರ್ವ ಕಾರ್ಮಿಕನ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಖಾಸಗಿ ಕಟ್ಟಡ ನಿರ್ಮಾಣದ ಕಾಮಗಾರಿಯ ವೇಳೆ ಈ ಒಂದು ಘಟನೆ ನಡೆದಿದೆ. ಇನ್ನೋರ್ವ ಕಾರ್ಮಿಕನ ರಕ್ಷಣೆಗೆ ಇದೀಗ ಎಸ್ಡಿಆರ್ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು. ಸುಮಾರು 20 ಅಡಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಮೈ ಮೇಲೆ ಮಣ್ಣು ಬಿದ್ದಿದೆ ಎಂದು ಹೇಳಲಾಗುತ್ತಿದೆ. ತಕ್ಷಣ ಘಟನ ಸ್ಥಳಕ್ಕೆ ಸಿಬ್ಬಂದಿ ಹಾಗೂ ಎಸ್ ಡಿ ಆರ್ ಎಫ್ ತಂಡ ಭೇಟಿ ನೀಡಿದ್ದು ರಕ್ಷಣಾ ಕಾರ್ಯಚರಣೆ ಒಂದು ಮುಂದುವರೆಸಲಾಗಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎಸ್ಪಿ ಸ್ಥಳಕ್ಕೆ ಆಗಮಿಸಿದ್ದಾರೆ.

