ಮಂಗಳೂರು : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಗುರುವಾರ (ಆಗಸ್ಟ್ 1) ರಂದು ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಗುರುವಾರ ಅರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕಾಸರಗೋಡು ಜಿಲ್ಲೆಗೆ ರೆಡ್ ಅಲೆರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

.jpeg)