(ಸಾಂದರ್ಭಿಕ ಚಿತ್ರ)
ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ಜು. 6ರಂದು ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ : ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
July 05, 2024
0
Tags

.jpeg)