ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಬಹುನಿರೀಕ್ಷಿತ “ಜೈ” ಸಿನಿಮಾ ನವಂಬರ್ 14 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಕನ್ನಡದ ಹಿರಿಯ ನಟ ಡಾ.ಶಿವರಾಜ್ ಕುಮಾರ್ ಅವರು ಬೆಂಗಳೂರಿನಲ್ಲಿ ಬಿಡುಗಡೆಯ ದಿನಾಂಕವನ್ನು ಬಿಡುಗಡೆಗೊಳಿಸಿದರು.ಜೈ ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ನ ಸಿನಿಮಾವಾಗಿದ್ದು, ತುಳು ಮತ್ತು ಕನ್ನಡ ಭಾಷೆಗಳಲ್ಲಿ ಸಿನೆಮಾ ಬಿಡುಗಡೆಯಾಗಲಿದೆ. ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ.ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆಳ್ವ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್. ಜೈ ಸಿನಿಮಾದಲ್ಲಿ ಖ್ಯಾತ ಬಾಲಿವುಡ್ ನಟ ಸುನೀಲ್ ಶೆಟ್ಟಿ, ಡಾ. ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಮೊದಲಾದವರ ದೊಡ್ಡ ತಾರಾ ಬಳಗವನ್ನು ಹೊಂದಿದೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆದಿದೆ. ನವೆಂಬರ್ 14 ರಂದು ಜೈ ಸಿನಿಮಾ ತೆರೆಕಾಣಲಿದೆ.
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಬಹುನಿರೀಕ್ಷಿತ “ಜೈ” ಸಿನಿಮಾ ನವಂಬರ್ 14ರಂದು ರಾಜ್ಯಾದ್ಯಂತ ತೆರೆಗೆ
July 08, 2025
0



