ಶ್ರೀ ಉದನೇಶ್ವರ ದೇವಸ್ಥಾನ, ಪೆರಡಾಲ ಆಮಂತ್ರಣ ಪತ್ರಿಕೆ ಹಾಗೂ ಲಾಂಛನ ಬಿಡುಗಡೆ 16ಕ್ಕೆಬದಿಯಡ್ಕ : ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ 2026ರ ಏಪ್ರಿಲ್ 17 ರಿಂದ ಏಪ್ರಿಲ್ 28ರ ವರೆಗೆ ನಡೆಯಲಿರುವ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಹಾಗೂ ಲಾಂಛನ ಬಿಡುಗಡೆ ಕಾರ್ಯಕ್ರಮವು ಈ ತಿಂಗಳ 16ರಂದು ಜರಗಲಿದೆ. ಆಮಂತ್ರಣ ಪತ್ರಿಕೆ ಹಾಗೂ ಲಾಂಛನ ಬಿಡುಗಡೆಯನ್ನು ಶ್ರೀಮದ್ ಎಡನೀರು ಮಠ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ನಡೆಸುವರು. ಭಕ್ತಾಭಿಮಾನಿಗಳೆಲ್ಲರೂ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

