ತಿರುವಂತಪುರ : ಕೇರಳ ಸೇರಿದಂತೆ ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ಸೇರಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು ದಿನಾಂಕ ಘೋಷಣೆಯಾಗಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮಾಹಿತಿ ನೀಡಿದರು.
ಅಸ್ಸಾಂ, ಪುದುಚೇರಿ, ಕೇರಳದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್ 9ರಂದು ವೋಟಿಂಗ್ ನಡೆಯಲಿದೆ.
ತಮಿಳುನಾಡು ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಏಪ್ರಿಲ್ 9ರಂದು ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಎಲ್ಲಾ ರಾಜ್ಯಗಳ ಮತ ಎಣಿಕೆ ಒಂದೇ ದಿನ ಮೇ 4ರಂದು ನಡೆಯಲಿದೆ
